ಚಿತ್ರದುರ್ಗ: ಜಿಲ್ಲೆಯಾದ್ಯಂತ ಬೀದಿ ನಾಯಿ, ಬಿಡಾಡಿ ದನ ಹಾಗೂ ಹಂದಿಗಳ ಕಾಟ ಹೆಚ್ಚಾಗಿದ್ದು, ನಾಗರಿಕರ ನಿದ್ದೆಗೆಡಿಸಿದೆ. ಇಡಿ ಊರನ್ನೇ ಸಾಮ್ರಾಜ್ಯ ಮಾಡಿಕೊಂಡಿರುವ ಇವು ಜನರಲ್ಲಿ ನಡುಕ ಸೃಷ್ಟಿಸಿವೆ. ಬೀದಿ ನಾಯಿ ಹಾಗೂ ಬಿಡಾಡಿ ದನಗಳು ಯಾವ ಕ್ಷಣದಲ್ಲಿ ಜನರ ಮೇಲೆ ದಾಳಿ ನಡೆಸುತ್ತವೆ ಎಂಬುದನ್ನು ಅಂದಾಜಿಸಲು ಆಗುತ್ತಿಲ್ಲ.

ಗ್ರಾಮೀಣ ಭಾಗದಲ್ಲಿ ಕುರಿ ಮತ್ತು ದನಗಳು ಮಕ್ಕಳ ಮೇಲೆ ದಾಳಿ ನಡೆಸುವುದು ಸಾಮಾನ್ಯವಾಗಿದ್ದು, ಬೈಕ್ಗಳಿಗೆ ಅಡ್ಡಬರುವ ನಾಯಿಗಳಿಂದ ತಪ್ಪಿಸಿಕೊಳ್ಳಲು ಹೋಗಿ ಸವಾರರು ಬಿದ್ದು ಗಾಯಗೊಳ್ಳುವುದು ಮಾಮೂಲಾಗಿದೆ. ಜಿಲ್ಲೆಯ ಒಂದಲ್ಲಾ ಒಂದು ಕಡೆ ನಿತ್ಯವೂ ಇಂತಹ ಘಟನೆಗಳು ಜರುಗುತ್ತಿವೆ.

ನಗರದ ಜೋಗಿಮಟ್ಟಿ ರಸ್ತೆ, ಪ್ರಶಾಂತ ನಗರ, ಕೆಳಗೋಟೆ, ಬುರುಜನಹಟ್ಟಿ, ಜೆಸಿಆರ್ ಬಡಾವಣೆ, ಬ್ಯಾಂಕ್ ಕಾಲೊನಿ, ಕೆಳಗೋಟೆ, ಆಜಾದ್ ನಗರ, ಚೇಳುಗುಡ್ಡ, ಹೊಳಲ್ಕೆರೆ ರಸ್ತೆ, ಐಯುಡಿಪಿ ಬಡಾವಣೆ, ಕಾಮನಬಾವಿ ಬಡಾವಣೆ, ಕೋಟೆ ಮುಖ್ಯ ರಸ್ತೆ ಸೇರಿ ಎಲ್ಲ ಬಡಾವಣೆಗಳಲ್ಲೂ ಇವುಗಳ ಕಾರುಬಾರು ಜೋರಾಗಿದೆ.

ಮುನ್ಸಿಪಲ್ ಕಾಲೊನಿ, ಹಳೆ ಧರ್ಮಶಾಲಾ ರಸ್ತೆ, ಬುದ್ಧನಗರ, ಸಿ.ಕೆ.ಪುರ ಬಡಾವಣೆ, ಪ್ರಸನ್ನ ಚಿತ್ರಮಂದಿರದ ರಸ್ತೆ, ಮಟನ್ ಮಾರುಕಟ್ಟೆ, ಖಾಸಗಿ ಬಸ್ ನಿಲ್ದಾಣ, ಎಪಿಎಂಸಿ ಆವರಣ ಸೇರಿದಂತೆ ಕೊಳೆಗೇರಿ ಪ್ರದೇಶ, ಖಾಲಿ ನಿವೇಶನ ಹಾಗೂ ಮೋರಿಗಳು ಹೆಚ್ಚಾಗಿರುವ ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ಗುಂಪು ಗುಂಪಾಗಿ ಓಡಾಡುವ ಇವು ಮಕ್ಕಳು, ಮಹಿಳೆಯರು ಹಾಗೂ ವೃದ್ಧರ ಜೊತೆ ಜಾನುವಾರುಗಳ ಮೇಲೂ ದಾಳಿ ನಡೆಸುತ್ತಿವೆ.

ಮನೆಗಳ ಮುಂಭಾಗದಲ್ಲಿ ನಾಯಿಗಳ ಹಿಂಡು ಸದಾ ಇರುತ್ತವೆ. ಇದರಿಂದ ಚಿಕ್ಕ ಮಕ್ಕಳು ಅಂಗಳದಲ್ಲಿ ನೆಮ್ಮದಿಯಿಂದ ಆಟವಾಡಲು ಸಾಧ್ಯವಾಗುತ್ತಿಲ್ಲ. ಬಹುತೇಕ ಬಡಾವಣೆಗಳಲ್ಲಿ ಮನೆಯ ಕಾಂಪೌಂಡ್, ನಿರ್ಮಾಣ ಹಂತದ ಕಟ್ಟಡಗಳನ್ನು ಇವು ಆಶ್ರಯತಾಣವಾಗಿಸಿಕೊಂಡಿವೆ.

ಇಷ್ಟು ವರ್ಷ ನಗರದಲ್ಲಿ ಮಾತ್ರ ಸಮಸ್ಯೆ ಸೃಷ್ಟಿಸಿದ್ದ ಬಿಡಾಡಿ ದನಗಳು ಇದೀಗ ತಮ್ಮ ವ್ಯಾಪ್ತಿಯನ್ನು ಹೆದ್ದಾರಿಗೂ ವಿಸ್ತರಿಸಿವೆ. ಬಿ.ಡಿ.ರಸ್ತೆ, ಮೆದೇಹಳ್ಳಿ ರಸ್ತೆ, ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ದಾವಣಗೆರೆ ಮಾರ್ಗದ ರೈಲ್ವೆ ಗೇಟ್, ಖಾಸಗಿ ಬಸ್ ನಿಲ್ದಾಣದ ಹಿಂಭಾಗ, ಸಂಗೊಳ್ಳಿ ರಾಯಣ್ಣ ವೃತ್ತ, ಹೊಳಲ್ಕೆರೆ ರಸ್ತೆ, ಕೆಳಗೋಟೆ, ಜಿಲ್ಲಾ ಆಸ್ಪತ್ರೆ ಮುಂಭಾಗದ ರಸ್ತೆ, ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ ಸೇರಿ ಮೊದಲಾದ ಕಡೆಗಳಲ್ಲಿ ರಸ್ತೆಯಲ್ಲೇ ಮಲಗಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿವೆ. ವೃತ್ತಗಳನ್ನು ಆಕ್ರಮಿಸಿಕೊಂಡಿರುವ ಜಾನುವಾರುಗಳಿಗೆ ರಸ್ತೆಗಳೇ ಆಶ್ರಯ ತಾಣವಾಗಿವೆ.

ಯಾವುದೇ ಆತಂಕವಿಲ್ಲದೆ ಮುಖ್ಯ ರಸ್ತೆಯಲ್ಲೇ ಸಾಲಾಗಿ ನಿಲ್ಲುವ ದನಗಳು ಯಾವ ಕಡೆ ತಿರುಗಿ ಸಾಗುತ್ತವೆ ಎಂಬುದನ್ನು ಊಹಿಸಲು ಸಾಧ್ಯವಾಗುವುದಿಲ್ಲ. ದೂರುಗಳು ಹೆಚ್ಚಿದಾಗ ಮಾತ್ರ ನಗರಸಭೆ ಅಧಿಕಾರಿಗಳು ಬಿಡಾಡಿ ದನಗಳ ಮಾಲೀಕರಿಗೆ ಎಚ್ಚರಿಕೆ ನೀಡುವ ಹಾಗೂ ಕೆಲವು ದನಗಳನ್ನು ಹಿಡಿದು ಸಾಗಿಸುವ ಕಾರ್ಯಾಚರಣೆ ಕೈಗೊಳ್ಳುತ್ತಾರೆ. ಇದು ಕಣ್ಣೊರೆಸುವ ತಂತ್ರವಾಗಿದ್ದು, ಶಾಶ್ವತ ಪರಿಹಾರ ಮಾತ್ರ ಸಿಗುತ್ತಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-44-1100594984

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.