ಗುರುವಾರ , ಸೆಪ್ಟೆಂಬರ್ 23, 2021
28 °C

ಚಿತ್ರದುರ್ಗ | ಬೀದಿ ನಾಯಿ ದಾಳಿ: ಮಗು ಗಂಭೀರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಬೀದಿ ನಾಯಿಗಳ ಗುಂಪೊಂದು ದಾಳಿ ನಡೆಸಿ ಬಾಲಕಿಯೊಬ್ಬರನ್ನು ಗಂಭೀರವಾಗಿ ಗಾಯಗೊಳಿಸಿವೆ.

ಅಜಾದ್ ನಗರದ ಗೌಸಿಯಾ (4) ಗಾಯಗೊಂಡ ಬಾಲಕಿ. ಬಾಲಕಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.

ಬಾಲಕಿ ಬೆಳಿಗ್ಗೆ ಮನೆ ಸಮೀಪ ಇರುವಾಗ ನಾಲ್ಕು ನಾಯಿಗಳು ಏಕಾಏಕಿ ದಾಳಿ ನಡೆಸಿವೆ. ಬಾಲಕಿಯನ್ನು ಎಳೆದೊಯ್ದು ಕಚ್ಚಿ ಗಾಯಗೊಳಿಸಿವೆ. ಇದನ್ನು ಗಮನಿಸಿದ ಜನರು ನಾಯಿಗಳನ್ನು ಓಡಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ.

ಬಾಲಕಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಾಲ್ಕು ದಿನಗಳ ಹಿಂದೆ ಜಮಿಲ್ (4) ಎಂಬ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿದ್ದವು. ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಆಗ್ರಹಿಸಿ ಅಜಾದ್ ನಗರದ ಜನರು ನಗರಸಭೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು