ಚಿತ್ರದುರ್ಗ: ‘ಉತ್ತಮ ಜೀವನ ಶೈಲಿಯ ಅನುಸರಣೆಯಿಂದ ಪೂರ್ವಿಕರು ತುಂಬಾ ಗಟ್ಟಿಮುಟ್ಟಾಗಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಒತ್ತಡದ ಬದುಕಿನಿಂದಾಗಿ ನೆಮ್ಮದಿ ಕಳೆದುಕೊಳ್ಳುತ್ತಿದ್ದಾರೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಎಚ್.ಆಂಜನೇಯ ತಿಳಿಸಿದರು.

ನಗರದ ರೋಟರಿ ಕ್ಲಬ್ ಸಭಾಂಗಣದಲ್ಲಿ ಶುಕ್ರವಾರ ಗೋಡೆಮನೆ ಆರೋಗ್ಯ ಮತ್ತು ರಸ್ತೆ ಜಾಗೃತಿ ಟ್ರಸ್ಟ್ ಹಾಗೂ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು ‘ಬದಲಾದ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಮನುಷ್ಯನ ಆರೋಗ್ಯ ದಿನ ದಿನಕ್ಕೂ ಕ್ಷೀಣಿಸುತ್ತಿದೆ. ವಿವಿಧ ಕಾಯಿಲೆಗಳಿಗೆ ತುತ್ತಾಗುವ ಮುನ್ನ ಎಚ್ಚರ ವಹಿಸುವುದು ಅನಿವಾರ್ಯ’ ಎಂದು ಹೇಳಿದರು.

‘ಇತ್ತೀಚಿನ ವರ್ಷಗಳಲ್ಲಿ ಎಲ್ಲವೂ ಕಲುಷಿತವಾಗುತ್ತಿವೆ. ತಿನ್ನುವ ಅನ್ನ, ನೀರು, ಸೇವಿಸುವ ಗಾಳಿಯೂ ಶುದ್ಧವಿಲ್ಲ. ಎಲ್ಲವೂ ಕಲಬೆರೆಕೆಯಿಂದ ಕೂಡಿದೆ. ಈ ಕಾರಣಕ್ಕಾಗಿಯೇ ಆರೋಗ್ಯ ಹಾಳಾಗುತ್ತಿದೆ’ ಎಂದು ಬೇಸರಿಸಿದರು.

‘ಇತ್ತೀಚಿನ ದಿನಗಳಲ್ಲಿ ರಾಜಕಾರಣದಲ್ಲಿ ಯುವಕರ ಪ್ರವೇಶ ಕಡಿಮೆಯಾಗುತ್ತಿದೆ. ರಾಜಕಾರಣಿಗಳ ಮಕ್ಕಳೇ ಈ ರಂಗದಲ್ಲಿ ಬರಬೇಕು ಎನ್ನುವ ಯಾವ ಕರಾರು ಇಲ್ಲ. ಕಾನೂನು ಸಹ ಇಲ್ಲ. ಆದರೆ ಯುವಕರು ಸ್ವಂತ ಶಕ್ತಿಯ ಮೇಲೆ ರಾಜಕಾರಣ ಪ್ರವೇಶ ಮಾಡಬೇಕು. ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು’ ಎಂದು ದೇವರಾಜ್ ಅರಸು ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಸಿ.ರಘುಚಂದನ್ ತಿಳಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಉಪಾಧ್ಯಕ್ಷ ವಿ.ಹನುಮಂತಪ್ಪ ಗೋಡೆಮನೆ, ಹೋರಾಟ ಗಾರ ಕೆ.ಟಿ.ಶಿವಕುಮಾರ್, ರೆಡ್ಕ್ರಾಸ್ ಸಂಸ್ಥೆಯ ಗಾಯತ್ರಿ ಶಿವರಾಮ್, ಹಿರಿಯ ಮುಖಂಡರಾದ ಸಿ.ಟಿ.ಕೃಷ್ಣಮೂರ್ತಿ, ಡಿ.ಎನ್.ಮೈಲಾರಪ್ಪ, ವಿನಯ್ ಗೋಡೆಮನೆ, ನವೀನ್ ಮಸ್ಕಲ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-44-1936809033

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.