ಚಿತ್ರದುರ್ಗ: ‘ತಾಲ್ಲೂಕಿನ ಗೋನೂರು ಬಳಿ ಕೊಲೆಯಾದ ಪದವಿ ವಿದ್ಯಾರ್ಥಿನಿ ವರ್ಷಿತಾ 8 ತಿಂಗಳ ಗರ್ಭಿಣಿಯಾಗಿದ್ದರು. ವಿವಾಹ ಮಾಡಿಕೊಳ್ಳುವಂತೆ ಒತ್ತಾಯ ಮಾಡಿದ್ದ ಕಾರಣ ಆರೋಪಿ ಚೇತನ್ ರಾಷ್ಟ್ರೀಯ ಹೆದ್ದಾರಿ 48ರ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕತ್ತು ಹಿಸುಕಿ ಕೊಲೆ ಮಾಡಿದ್ದ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು.

‘ಮರಣೋತ್ತರ ಪರೀಕ್ಷೆಯ ವೇಳೆ 8 ತಿಂಗಳ ಭ್ರೂಣ ಪತ್ತೆಯಾಗಿದೆ. ವರದಿ ಇನ್ನೂ ಬರಬೇಕಿದೆ. ಕಳೆದ 10 ತಿಂಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆ ವಿಚಾರ ಬಂದಾಗ ಆರೋಪಿ ಕೊಲೆ ಮಾಡುವ ಸಂಚು ರೂಪಿಸಿದ್ದ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಗಂಗಾವತಿಯ ಮಲ್ಟಿ ನೆಟ್ವರ್ಕಿಂಗ್ ಕಂಪನಿಯೊಂದರಲ್ಲಿ ಆರೋಪಿ ಕೆಲಸ ಮಾಡುತ್ತಿದ್ದ. ಉದ್ಯೋಗಾಕಾಂಕ್ಷಿಗಳನ್ನು ಕಂಪನಿಗಳ ಸಂಪರ್ಕಕ್ಕೆ ತರುವುದು ಈತನ ಕೆಲಸವಾಗಿತ್ತು. ಇನ್ಸ್ಟಾಗ್ರಾಂನಲ್ಲಿ ವರ್ಷಿತಾ ಅವರನ್ನು ಪರಿಚಯ ಮಾಡಿಕೊಂಡು ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದ. ಪರಿಚಯ ಪ್ರೀತಿಗೆ ತಿರುಗಿತ್ತು. ನಗರದ ಕೆಳಗೋಟೆ ನಿವಾಸಿಯಾದ ಈತ ಆಗಾಗ ವಿದ್ಯಾರ್ಥಿನಿಯನ್ನು ಭೇಟಿಯಾಗುತ್ತಿದ್ದ’ ಎಂದು ವಿವರಿಸಿದರು.

‘ಆ.18ರಂದು ಮಧ್ಯಾಹ್ನ 3.30ರ ವೇಳೆಯಲ್ಲಿ ಕೊಲೆ ಮಾಡಿದ್ದ ಆರೋಪಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಮಳೆ ಸುರಿಯುತ್ತಿದ್ದ ಕಾರಣ ಬೆಂಕಿ ನಂದಿ ಹೋಗಿತ್ತು. ಹೀಗಾಗಿ ರಾತ್ರಿ ಮತ್ತೆ ಪೆಟ್ರೋಲ್ ತಂದು ಬೆಂಕಿ ಹಚ್ಚಿದ್ದ. ಆ. 19ರಂದು ಮೃತದೇಹ ಪತ್ತೆಯಾಗಿತ್ತು. ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಪತ್ತೆ ಹೆಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ’ ಎಂದು ಮಾಹಿತಿ ನೀಡಿದರು.

ಆರೋಪಿಗೆ ರಕ್ತ ಕ್ಯಾನ್ಸರ್: ‘ಆರೋಪಿ ಚೇತನ್ 3ನೇ ಹಂತದ ರಕ್ತ ಕ್ಯಾನ್ಸರ್ನಿಂದ ಬಳಲುತ್ತಿದ್ದಾನೆ. ಕ್ಯಾನ್ಸರ್ ಇರುವುದು ಗೊತ್ತಾದ ನಂತರ ವಿದ್ಯಾರ್ಥಿನಿ ಈತನಿಂದ ದೂರವಾಗಿದ್ದರು. ಜೊತೆಗೆ ಬೇರೊಬ್ಬ ಯುವಕನೊಂದಿಗೆ ಸಂಬಂಧ ಬೆಳೆಸಿದ್ದರು. ಇದು ಚೇತನ್ಗೆ ಕೋಪ ತರಿಸಿತ್ತು. ಗರ್ಭಿಣಿಯಾಗಿರುವ ವಿಷಯ ತಿಳಿದು ಮದುವೆಯಾಗುವಂತೆ ಒತ್ತಾಯಿಸಿದಾಗ ಗರ್ಭದಲ್ಲಿರುವ ಮಗು ತನ್ನದಾ ಎಂಬ ಅನುಮಾನ ಕಾಡಿತ್ತು. ಈ ಎಲ್ಲಾ ಕಾರಣಗಳಿಂದ ಕೊಲೆ ಮಾಡಿದ್ದಾನೆ’ ಎಂದು ತಿಳಿಸಿದರು.

ಡಿಎನ್ಎ ಪರೀಕ್ಷೆಗೆ ಸಿದ್ಧತೆ

‘ವರ್ಷಿತಾ ಬೇರೊಬ್ಬ ಯುವಕನ ಜೊತೆ ಸಂಬಂಧ ಬೆಳೆಸಿದ್ದಳು. ಆಕೆಯ ಗರ್ಭದಲ್ಲಿರುವ ಭ್ರೂಣ ತನ್ನದಲ್ಲ. ತನ್ನನ್ನು ಮದುವೆಯಾಗುವಂತೆ ಒತ್ತಾಯ ಮಾಡಿದ್ದ ಕಾರಣಕ್ಕೆ ಕೊಲೆ ಮಾಡಿರುವುದಾಗಿ ಆರೋಪಿ ತಿಳಿಸಿದ್ದಾನೆ. ಈ ಕುರಿತ ಗೊಂದಲ ನಿವಾರಣೆಗಾಗಿ ಆರೋಪಿ ಹಾಗೂ ಭ್ರೂಣದ ಡಿಎನ್ಎ ಪರೀಕ್ಷೆ ಮಾಡಲಾಗುವುದು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.