ಚಿತ್ರದುರ್ಗ: ‘ಕ್ಷಯ ರೋಗವು ಬಡವ, ಶ್ರೀಮಂತ, ಗಂಡು-ಹೆಣ್ಣೆಂಬ ಭೇದವಿಲ್ಲದೆ, ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಯಾರಿಗೆ ಬೇಕಾದರೂ ಬರಬಹುದು. ಜನಶಕ್ತಿಯೊಂದಿಗೆ ಒಗ್ಗೂಡಿ ಶ್ರಮಿಸಿದರೆ ಕ್ಷಯ ಮುಕ್ತ ಭಾರತ ನಿರ್ಮಿಸಲು ಸಾಧ್ಯ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಬಸವೇಶ್ವರ ವೈದ್ಯಕೀಯ ವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಕ್ಷಯರೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

‘ಧೂಮಪಾನಿಗಳು, ಚಿಕಿತ್ಸೆ ಪಡೆಯದ ಕ್ಷಯರೋಗಿಗಳ ಸಂಪರ್ಕದಲ್ಲಿ ಇರುವವರು ಹಾಗೂ ಗಾಳಿ-ಬೆಳಕಿಲ್ಲದ ಇಕ್ಕಟ್ಟಾದ ಜಾಗದಲ್ಲಿ ವಾಸಿಸುವವರಿಗೆ ರೋಗ ಹರಡುವ ಸಾಧ್ಯತೆ ಹೆಚ್ಚು’ ಎಂದರು.

‘ಎರಡು ವಾರಕ್ಕಿಂತ ಹೆಚ್ಚು ಕಾಲ ಕೆಮ್ಮು, ಕಫ, ಸಂಜೆ ವೇಳೆ ಜ್ವರ, ತೂಕ ಇಳಿಕೆ ಹಾಗೂ ಹಸಿವಾಗದಿರುವುದು ಕ್ಷಯದ ಪ್ರಮುಖ ಲಕ್ಷಣಗಳಾಗಿದ್ದು, ಇಂತಹ ಲಕ್ಷಣ ಕಂಡುಬಂದಲ್ಲಿ ಕೂಡಲೇ ಸರ್ಕಾರಿ ಆಸ್ಪತ್ರೆಯಲ್ಲಿ ಕಫ ಪರೀಕ್ಷೆ ಮಾಡಿಸಿಕೊಳ್ಳಬೇಕು. ರೋಗ ದೃಢಪಟ್ಟಲ್ಲಿ ಉಚಿತವಾಗಿ ದೊರೆಯುವ ಚಿಕಿತ್ಸೆ ಪಡೆದು ಗುಣಮುಖರಾಗಬೇಕು’ ಎಂದು ಹೇಳಿದರು.

‘ದೇಶದಲ್ಲಿ ಪ್ರತಿ ಮೂರು ನಿಮಿಷಕ್ಕೆ ಇಬ್ಬರು ಕ್ಷಯದಿಂದ ಮರಣ ಹೊಂದುತ್ತಿದ್ದಾರೆ. ಸಮಾಜದಲ್ಲಿನ ತಪ್ಪು ತಿಳಿವಳಿಕೆಗಳು ರೋಗ ನಿಯಂತ್ರಣಕ್ಕೆ ಅಡ್ಡಿಯಾಗಿವೆ. ಆಧುನಿಕ ವೈದ್ಯಕೀಯ ಪದ್ಧತಿಯಲ್ಲಿ ಚುಚ್ಚುಮದ್ದು ಇಲ್ಲದೆ ಮಾತ್ರೆಗಳ ಮೂಲಕ ಆರು ತಿಂಗಳಲ್ಲೇ ರೋಗಿಯನ್ನು ಸಂಪೂರ್ಣ ಗುಣಪಡಿಸಬಹುದು’ ಎಂದು ಬಸವೇಶ್ವರ ವೈದ್ಯಕೀಯ ವಿದ್ಯಾಲಯದ ಶ್ವಾಸಕೋಶ ತಜ್ಞ ಡಾ.ಬಸವರಾಜ್ ಸಂಗೊಳ್ಳಿ ತಿಳಿಸಿದರು.

‘ಒಬ್ಬ ಕ್ಷಯ ರೋಗಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡದಿದ್ದರೆ ವರ್ಷಕ್ಕೆ 10 ರಿಂದ 15 ಜನರಿಗೆ ಸೋಂಕು ಹರಡಬಹುದು. ಇಲಾಖೆಯ ಅಧಿಕಾರಿಗಳು ಹಾಗೂ ಸಮುದಾಯ ಒಗ್ಗೂಡಿ ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಶ್ರಮಿಸೋಣ’ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸಿ.ಒ.ಸುಧಾ ಹೇಳಿದರು.

‘ವೈಜ್ಞಾನಿಕವಾಗಿ ನಾವು ಮುಂದುವರಿದಿರುವುದು ನಿಜ. ಆದರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ನಾವು ಹಿಂದೆ ಇದ್ದೇವೆ. ಬಡತನ ಮತ್ತು ಅಪೌಷ್ಟಿಕತೆಯಿಂದ ರೋಗಗಳು ಬರುವ ಸಾಧ್ಯತೆ ಹೆಚ್ಚಿದ್ದು, ರೋಗಿಗಳಿಗೆ ಚಿಕಿತ್ಸೆಯ ಜೊತೆಗೆ ಮಾಹಿತಿ ಶಿಕ್ಷಣ ನೀಡುವುದು ಅಗತ್ಯವಾಗಿದೆ’ ಎಂದು ಜಿಲ್ಲಾ ಯೋಜನೆ ಅಭಿವೃದ್ಧಿ ಅಧಿಕಾರಿ ಡಾ.ಕಾಶಿ ತಿಳಿಸಿದರು.

ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಡಿ.ಎಂ.ಅಭಿನವ, ಡಿಎಲ್ಒ ಡಾ.ನಾಗರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-44-380632715

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.