ಚಿತ್ರದುರ್ಗ: ‘ಕ್ಷಯವು ಅತ್ಯಂತ ಹಳೆಯ ಸಾಂಕ್ರಾಮಿಕ ರೋಗವಾಗಿದೆ. ಜಾಗೃತಿ ಮತ್ತು ಸೂಕ್ತ ಚಿಕಿತ್ಸೆಯ ಮೂಲಕ ಟಿ.ಬಿ ಮುಕ್ತ ಭಾರತದತ್ತ ನಾವೆಲ್ಲರೂ ಒಗ್ಗೂಡಿ ಶ್ರಮಿಸೋಣ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಹೇಳಿದರು.

ನಗರದ ಎಂ.ಕೆ.ಪ್ಯಾಲೇಸ್ನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಿಶ್ವ ಕ್ಷಯರೋಗ ದಿನಾಚರಣೆಯಲ್ಲಿ ಮಾತನಾಡಿದರು. ‘ಎರಡು ವಾರಕ್ಕಿಂತ ಹೆಚ್ಚು ಸಮಯ ಕೆಮ್ಮು, ಕಫ, ಕಫದಲ್ಲಿ ರಕ್ತ ಬರುವುದು, ಸಂಜೆ ವೇಳೆ ಜ್ವರ, ಮೈ ಬೆವರುವುದು, ತೂಕ ಕಡಿಮೆಯಾಗುವುದು ಮತ್ತು ಹಸಿವಾಗದೆ ಇರುವ ಲಕ್ಷಣಗಳಿರುವವರು ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಫ ಪರೀಕ್ಷೆ ಮಾಡಿಸಿಕೊಳ್ಳಬೇಕು. ರೋಗ ದೃಢಪಟ್ಟಲ್ಲಿ ಸರ್ಕಾರದಿಂದ ಉಚಿತವಾಗಿ ಚಿಕಿತ್ಸೆ ಲಭ್ಯವಿದ್ದು, ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆದು ಮುಂಜಾಗ್ರತಾ ಕ್ರಮ ಪಾಲಿಸುವ ಮೂಲಕ ರೋಗ ನಿರ್ಮೂಲನೆಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಡಿ.ಎಂ.ಅಭಿನವ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಬಿ.ವಿ.ಗಿರೀಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯಕ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-44-1849601736

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.