ಶುಕ್ರವಾರ, ಅಕ್ಟೋಬರ್ 2, 2020
21 °C

ಚಿತ್ರದುರ್ಗ: ಗೋಡೆ ಕುಸಿದು ಬಾಲಕಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಧಾರಾಕಾರವಾಗಿ ಸುರಿದ ಮಳೆಗೆ ಚಳ್ಳೆಕೆರೆ ತಾಲ್ಲೂಕಿನ ಜಾಜೂರು ಗ್ರಾಮದಲ್ಲಿ ಗೋಡೆ ಕುಸಿದು ಆರು ವರ್ಷದ ಬಾಲಕಿ ಮೃತಪಟ್ಟಿದ್ದಾರೆ.

ಚಲ್ಮೇಶ ಮತ್ತು ಲಕ್ಷ್ಮೀದೇವಿ ದಂಪತಿಯ ಪುತ್ರಿ ಸೃಜನಾ (6) ಮೃತ ಬಾಲಕಿ. ರಾತ್ರಿ ಮಲಗಿದ್ದಾಗ ಗೋಡೆ ಕುಸಿದು ಅನಾಹುತ ಸಂಭವಿಸಿದೆ ಎಂದು ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ ತಿಳಿಸಿದ್ದಾರೆ.

ನನ್ನಿವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಗಾರದೇವರಹಟ್ಟಿ ಗ್ರಾಮದಲ್ಲಿ ಚಪ್ಪರ ಕುಸಿದು ಬಿದ್ದು ಕಾಟಯ್ಯ ಎಂಬುವರ ಒಂದು ಎತ್ತು ಹಾಗೂ ಎರಡು ಕುರಿಗಳು ಸಾವನ್ನಪ್ಪಿವೆ. ರಾಮಜೋಗಿಹಳ್ಳಿಯ ರತ್ನಮ್ಮ, ಕೆರೆಯಾಗಲಹಳ್ಳಿಯ ಕುಬೇರಪ್ಪ ಎಂಬುವರ ಹಳೆ ಮಾಳಿಗೆ ಮನೆ ಕುಸಿದು ಬಿದ್ದಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು