ಚಿತ್ರದುರ್ಗ: ನಗರದ ಬಾಪೂಜಿ ಸಮೂಹ ಸಂಸ್ಥೆಯಲ್ಲಿ ಮಾ.27 ರಂದು ಬೆಳಿಗ್ಗೆ 10.30ಕ್ಕೆ ರಂಗಸೌರಭ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶಿಕ್ಷಣದಲ್ಲಿ ರಂಗಕಲೆ ರಂಗಭೂಮಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಎಂ.ವೀರೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರಾಂಶುಪಾಲೆ ಎಂ.ಆರ್.ಜಯಲಕ್ಷ್ಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಹುರುಳಿ ಎಂ.ಬಸವರಾಜ್ ಅವರು ‘ಶಿಕ್ಷಣದಲ್ಲಿ ರಂಗಭೂಮಿಯ ಸಾಧ್ಯತೆ’ ಬಗ್ಗೆ ಉಪನ್ಯಾಸ ನೀಡುವರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ್, ರಂಗಭೂಮಿ ಕಲಾವಿದ ಕೆ.ಜಂಬುನಾಥ್, ಬಾಪೂಜಿ ಸಮೂಹ ಸಂಸ್ಥೆಗಳ ನಿರ್ದೇಶಕ ಕೆ.ಎಂ.ಚೈತನ್ಯ ಭಾಗವಹಿಸುವರು. ರಂಗ ನಿರ್ದೇಶಕ ಕೆ.ಪಿ.ಎಂ. ಗಣೇಶಯ್ಯ ರಂಗ ಸಂದೇಶ ವಾಚನ ಮಾಡಲಿದ್ದಾರೆ ಎಂದು ರಂಗಸೌರಭ ಕಲಾ ಸಂಘದ ಅಧ್ಯಕ್ಷ ಮೋಹನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-44-666574328

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.