ಚಿತ್ರದುರ್ಗ: ಮೊಳಕಾಲ್ಮುರು ತಾಲ್ಲೂಕು ಭೈರಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎ ಯಲ್ಲಿ ಸಾಲಾಗಿ ಬರುತ್ತಿದ್ದ 3 ಎತ್ತಿನ ಗಾಡಿಗಳಿಗೆ ಗುರುವಾರ ಬೆಳಿಗ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೊತೆಗೆ 4 ಎತ್ತುಗಳು ಕೂಡ ಮೃತಪಟ್ಟಿವೆ. ಅದೃಷ್ಟವಶಾತ್ ಎತ್ತಿನ ಗಾಡಿಗಳಲ್ಲಿದ್ದ ರೈತರು ಪಾರಾಗಿದ್ದಾರೆ.

ಮೃತಚಾಲಕನ ಗುರುತು ಪತ್ತೆಯಾಗಿಲ್ಲ. ಭೈರಾಪುರ ಗ್ರಾಮದ ರೈತರು ಬೆಳಿಗ್ಗೆ ತಮ್ಮ ಜಮೀನುಗಳಿಗೆ ಹೊರಟಿದ್ದರು. ಟಿಪ್ಪರ್ ಲಾರಿ ಚಳ್ಳಕೆರೆಯಿಂದ ಬಳ್ಳಾರಿ ಕಡೆಗೆ ತೆರಳುತ್ತಿತ್ತು. ಬೆಳಿಗ್ಗೆ ದಟ್ಟ ಮಂಜು ಕವಿದಿದ್ದ ಕಾರಣ ಎತ್ತಿನಗಾಡಿಗಳು ಕಾಣದೇ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಎತಿನ ಗಾಡಿಗಳು ಒಂದಕ್ಕೊಂದು ಗುದ್ದಿಕೊಂಡು ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದಿದ್ದವು. ಕೆಲಕಾಲ ಟ್ರಾಫಿಕ್ ಜಾಮ್ ಆಗಿತ್ತು. ಘಟನೆಯಲ್ಲಿ 2 ಎತ್ತು ತೀವ್ರವಾಗಿ ಗಾಯಗೊಂಡಿವೆ. ರೈತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೊಳಕಾಲ್ಮುರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.