ಚಿತ್ರದುರ್ಗ: ‘ದೇಶದಲ್ಲಿ ಪ್ರತಿವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಮೃತಪಡುತ್ತಿದ್ದಾರೆ. ರಾಜ್ಯದಲ್ಲಿಯೂ ಈ ಸಂಖ್ಯೆ ಹೆಚ್ಚಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎನ್.ಕಾಶಿ ಕಳವಳ ವ್ಯಕ್ತಪಡಿಸಿದರು.

ನಗರದ ಬಸಪ್ಪ ಆಸ್ಪತ್ರೆ ಆವರಣದಲ್ಲಿ ಬುಧವಾರ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

‘ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತದೆ. ಶಾಲಾ-ಕಾಲೇಜುಗಳ ಬಳಿ ತಂಬಾಕು ಉತ್ಪನ್ನ ಮಾರಾಟದ ವಿರುದ್ಧ ಕಾರ್ಯಾಚರಣೆ, ವ್ಯಸನಿಗಳಿಗೆ ಆಪ್ತಸಮಾಲೋಚನೆ ಹಾಗೂ ತಂಬಾಕು ಮುಕ್ತ ಹಳ್ಳಿಗಳ ಘೋಷಣೆ ಸೇರಿದಂತೆ ಹಲವು ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದರು.

‘ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಕಳೆದ ವರ್ಷ ಜಿಲ್ಲೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. 102 ಶಿಕ್ಷಣ ಸಂಸ್ಥೆಗಳ 16,398 ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ, 78 ಸಂಸ್ಥೆಗಳನ್ನು ತಂಬಾಕು ಮುಕ್ತಗೊಳಿಸಲಾಗಿದೆ. ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಒಟ್ಟು 92 ಕಾರ್ಯಾಚರಣೆ ನಡೆಸಲಾಗಿದೆ’ ಎಂದು ತಿಳಿಸಿದರು.

ಬಸಪ್ಪ ಆಸ್ಪತ್ರೆ ಆವರಣದಿಂದ ಆರಂಭವಾದ ಜಾಗೃತಿ ಜಾಥಾ ತುರುವನೂರು ರಸ್ತೆ ಮಾರ್ಗವಾಗಿ ರೆಡ್ಡಿ ಕಲ್ಯಾಣ ಮಂಟಪದವರೆಗೆ ಸಾಗಿತು. ವಿವೇಕಾನಂದ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಕಾರ್ಯದರ್ಶಿ ಡಾ.ರಂಗಾರೆಡ್ಡಿ, ಪ್ರಾಂಶುಪಾಲರಾದ ರಿನಿ ರಾಜನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯ್ಕ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್, ಸಾಮಾಜಿಕ ಕಾರ್ಯಕರ್ತ ಕೆ.ಎಂ.ತಿಪ್ಪೇಸ್ವಾಮಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೂಗಪ್ಪ, ದತ್ತಾಂಶ ನಮೂದು ನಿರ್ವಾಹಕಿ ಸಾಗರಿಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-44-1771806503

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.