ಚಿತ್ರದುರ್ಗ: ‘ನಗರದ ಸಮಗ್ರ ಅಭಿವೃದ್ಧಿಗೆ ರೂಪುರೇಷೆ ತಯಾರಿಸಲಾಗಿದೆ. ಇದರ ಅನುಷ್ಠಾನಕ್ಕೆ ಜನರ ಹಾಗೂ ಬೀದಿಬದಿ ವ್ಯಾಪಾರಸ್ಥರ ಸಹಕಾರ ಅಗತ್ಯ’ ಎಂದು ಶಾಸಕ ಕೆ.ಸಿ.ವೀರೇಂದ್ರ ತಿಳಿಸಿದರು.

ಇಲ್ಲಿನ ಕೆಳಗೋಟೆ ಪ್ರದೇಶಕ್ಕೆ ಈಚೆಗೆ ಭೇಟಿ ನೀಡಿ ಜನರ ಕುಂದುಕೊರತೆ ಆಲಿಸಿ ಮಾತನಾಡಿದರು. ‘ನಗರದ ಅಭಿವೃದ್ಧಿ ನನ್ನ ಮೂಲ ಉದ್ದೇಶ. ವಿವಿಧೆಡೆ ಬೀದಿಬದಿ ತಿನಿಸಿನ ಅಂಗಡಿಗಳನ್ನು ತೆರವುಗೊಳಿಸಿ ಅದೇ ಸ್ಥಳದಲ್ಲಿ ನಗರಸಭೆಯಿಂದ ಆಹಾರ ಮಳಿಗೆ ನಿರ್ಮಿಸಲಾಗುತ್ತಿದೆ’ ಎಂದರು.

‘ಸರಸ್ವತಿ ಕಾನೂನು ಕಾಲೇಜು ಮುಂಭಾಗದಲ್ಲಿ ಆಹಾರ ಮಳಿಗೆ ನಿರ್ಮಿಸಲು ಯೋಜನೆ ಸಿದ್ಧಗೊಳಿಸಲಾಗಿದೆ. ಇದರಿಂದ ಜನರಿಗೆ, ಮಾಲೀಕರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಒಂದೇ ಸೂರಿನಡಿಯಲ್ಲಿ ಸಕಲ ಸೌಲಭ್ಯ ನೀಡಲಾಗುತ್ತದೆ’ ಎಂದು ತಿಳಿಸಿದರು.

ಕೆಳಗೋಟೆಯ ಭೋವಿ ಕಾಲೊನಿಯ ರಾಜ ಕಾಲುವೆಯ ತಡೆಗೋಡೆಗಳು ಕುಸಿದಿವೆ. ಕೂಡಲೇ ಕ್ರಮವಹಿಸಬೇಕೆಂದು ಸ್ಥಳೀಯರು ಮನವಿ ಮಾಡಿದರು. ನಗರಸಭೆ ಪೌರಾಯುಕ್ತೆ ಲಕ್ಷ್ಮಿ ಅವರನ್ನು ಸ್ಥಳಕ್ಕೆ ಕರೆಸಿ ಇಲ್ಲಿನ ಜನರಿಗೆ ಆಗುತ್ತಿರುವ ತೊಂದರೆ ಸರಿಪಡಿಸುವಂತೆ ಶಾಸಕರು ಸೂಚಿಸಿದರು.

ನಿವಾಸಿಗಳಾದ ಅಂಜಿನಪ್ಪ, ಮಲ್ಲಿಕಾರ್ಜುನ್, ಸುರೇಶ್, ರವಿಕುಮಾರ್, ಸುಜಾತಮ್ಮ, ಲಕ್ಷ್ಮಮ್ಮ, ಮಂಜಮ್ಮ, ಓಬಣ್ಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-44-800872301

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.