ಚಿತ್ರದುರ್ಗ: ‘ತಾಲ್ಲೂಕಿನ ವಡ್ಡನಹಳ್ಳಿ ಗ್ರಾಮದ ಸರ್ವೆ ನಂಬರ್ 145ರ ಕೃಷಿ ಜಮೀನಿನಲ್ಲಿ ಕ್ರಷರ್ಗೆ ನೀಡಿರುವ ಅನುಮತಿ ರದ್ದುಗೊಳಿಸಬೇಕು’ ಎಂದು ಒತ್ತಾಯಿಸಿ ಐಯ್ಯನಹಳ್ಳಿ ಗ್ರಾಮ ಪಂಚಾಯಿತಿಯ ವಡ್ಡನಹಳ್ಳಿ ಹಾಗೂ ತಿಮ್ಮಪ್ಪನಹಳ್ಳಿ ಗ್ರಾಮಸ್ಥರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರವಾಸಿ ಮಂದಿರದ ಆವರಣದಲ್ಲಿ ಸೇರಿದ ನೂರಾರು ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು.

‘ಕೃಷಿ ಜಮೀನಿನಲ್ಲಿ ಕಲ್ಲು ಕ್ರಷರ್ ಚಟುವಟಿಕೆ ನಡೆಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. 2023ರಿಂದಲೂ ಹೋರಾಟ ನಡೆಸುತ್ತಿದ್ದರೂ ಅಧಿಕಾರಿಗಳು ಕ್ರಷರ್ ಚಟುವಟಿಕೆಗೆ ಅನುಮತಿ ನೀಡಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೃಷಿ ಜಮೀನು ಉಳಿಸುವಂತೆ ಮನವಿ ಮಾಡಿದರು.

‘ಮಳೆಗಾಲ ಆರಂಭವಾಗಿದ್ದು, ಮೆಕ್ಕೆಜೋಳ ಬಿತ್ತನೆ ಮಾಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ಜಮೀನಿನಲ್ಲಿ ಗುಂಡಿ ತೋಡಿಸಿದ್ದಾರೆ. ಜಲ್ಲಿಕಲ್ಲುಗಳನ್ನು ತಂದು ಜಮೀನಿಗೆ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಕೃಷಿ ಭೂಮಿಯನ್ನು ಕ್ರಷರ್ಗೆ ಬಿಡುವುದಿಲ್ಲ. ಇಲ್ಲಿ ಕ್ರಷರ್ಗೆ ಅವಕಾಶ ನೀಡಿದರೆ ಸುತ್ತಮುತ್ತಲಿನ ನೂರಾರು ಎಕರೆ ಜಮೀನುಗಳಿಗೆ ತೊಂದರೆಯಾಗಲಿದೆ. ಕೊಳವೆ ಬಾವಿಗಳು ಬತ್ತಿ ಹೋಗಲಿವೆ. ರೈತರ ಜಮೀನುಗಳೇ ಹಾಳಾಗಲಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಸರ್ಕಾರ ನೀಡಿರುವ ಅನುಮತಿ ವಿರುದ್ಧ ನಾವು ಕೋರ್ಟ್ನಲ್ಲಿ ದಾವೆ ಹೂಡುತ್ತೇವೆ. ಕೃಷಿ ಜಮೀನಿನಲ್ಲಿ ಕ್ರಷರ್, ಕಲ್ಲು ಗಣಿ ನಡೆಸಲು ಅವಕಾಶವಿಲ್ಲ ಎಂದು ನಿಯಮವೇ ಹೇಳುತ್ತದೆ. ಇದನ್ನು ಕೋರ್ಟ್ ಗಮನಕ್ಕೆ ತಂದು ತಡೆಯಾಜ್ಞೆ ತರುತ್ತೇವೆ. ಅಷ್ಟರೊಳಗೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ಅನುಮತಿ ರದ್ದುಗೊಳಿಸಬೇಕು. ರೈತರ ಜೀವನಾಡಿಯಾಗಿರುವ ಕೃಷಿ ಜಮೀನಿನಲ್ಲಿ ಅಧಿಕಾರಿಗಳು ಕ್ರಷರ್ಗೆ ಅನುಮತಿ ನೀಡಿರುವುದು ಖಂಡನೀಯ. ಸಾಗುವಳಿ ಚೀಟಿ ಕೊಟ್ಟ ಜಮೀನಿನಲ್ಲಿ ಕ್ರಷರ್ ನಡೆಸಲು ಅನುಮತಿ ನೀಡಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘2023ರಲ್ಲಿ ಕ್ರಷರ್ ಚಟುವಟಿಕೆ ಸಂಬಂಧ ಸರ್ವೆ ಕಾರ್ಯ ಮಾಡಿದಾಗಲೇ ನಾವು ಹೋರಾಟ ಆರಂಭಿಸಿದ್ದೆವು. ಜಿಲ್ಲಾಧಿಕಾರಿಗೂ ಮನವಿ ಮಾಡಿದ್ದೆವು. ಆದರೆ ನಮ್ಮ ಹೋರಾಟಕ್ಕೆ ಅಧಿಕಾರಿಗಳು ಕಿಮ್ಮತ್ತು ನೀಡಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಖಂಡಿಸಿ ನಾವು ಬೆಂಗಳೂರಿನವರೆಗೂ ಪಾದಯಾತ್ರೆ ಮಾಡುತ್ತೇವೆ. ಕಂದಾಯ ಸಚಿವ ಕೃಷ್ಣಬೈರೇಗೌಡ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೂ ಮನವಿ ಸಲ್ಲಿಸುತ್ತೇವೆ’ ಎಂದು ಹೇಳಿದರು.

ಉಪವಿಭಾಗಾಧಿಕಾರಿ ಸ್ಥಳಕ್ಕೆ ಬಂದು ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿದರು. ನಿಯಮಾನುಸಾರ ಸ್ಥಳ ಪರಿಶೀಲನೆ ನಡೆಸಿ ಕ್ರಮ ವಹಿಸುವುದಾಗಿ ಭರವಸೆ ನೀಡಿದರು. ಎನ್.ಸುರೇಶ್, ತಿಪ್ಪೇಸ್ವಾಮಿ, ವೀರೇಶ್, ಜಯಣ್ಣ, ಗೋಪಿ, ಶರಣಮ್ಮ, ದಿಲೀಪ್, ಮಂಜುಳಾ, ಸಣ್ಣಮ್ಮ, ಶಾರದಮ್ಮ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-44-615173315

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.