ಚಿತ್ರದುರ್ಗ: ‘ಹಿರಿಯೂರು ಸಮೀಪದ ವಾಣಿವಿಲಾಸ ಸಾಗರ ಜಲಾಶಯದ ಸಮೀಪ ಆಗಾಗ ಅಪರಿಚಿತ ಶವಗಳು ಪತ್ತೆಯಾಗುತ್ತಿದ್ದು, ಸರ್ಕಾರ ಆದಷ್ಟು ಬೇಗ ಜಲಾಶಯಕ್ಕೆ ರಾಜ್ಯ ಕೈಗಾರಿಕಾ ಭದ್ರತಾ ಪಡೆಯನ್ನು ನಿಯೋಜಿಸಬೇಕು’ ಎಂದು ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಪಿ. ಸೂರಪ್ಪ ಒತ್ತಾಯಿಸಿದರು.

‘ಜಿಲ್ಲಾಧಿಕಾರಿ ಮುಖಾಂತರ ರಾಜ್ಯ ಪೊಲೀಸ್ ಮುಖ್ಯಸ್ಥರ ಕಚೇರಿಗೆ ಈಗಾಗಲೇ ಮನವಿ ರವಾನಿಸಲಾಗಿದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಜಲಾಶಯದ ಸಮೀಪ ಆಗಾಗ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಈಚೆಗೆ ಜಲಾಶಯದ ಬಳಿ ಬೆಸ್ಕಾಂ ನೌಕರನ ಶವ ಪತ್ತೆಯಾಗಿದೆ. ವಾರದ ಹಿಂದಷ್ಟೇ ಈಜಲು ತೆರಳಿದ್ದ ಮಗುವೊಂದು ನಾಲೆಯಲ್ಲಿ ಕೊಚ್ಚಿ ಹೋಗಿದೆ. ಜಲಾಶಯದ ಬಳಿ ಸಂಭವಿಸುವ ಸಾವುಗಳಿಗೆ ಲೆಕ್ಕವೇ ಇಲ್ಲವಾಗಿದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.

‘ಜಲಾಶಯ ವೀಕ್ಷಣೆಗೆ ಬರುವ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹೋಗಿ ಜೀವಕ್ಕೆ ಅಪಾಯ ತಂದುಕೊಳ್ಳುತ್ತಿದ್ದಾರೆ. ಜಲಾಶಯದ ಬಳಿ ರೀಲ್ಸ್ ಮಾಡುವವರ ಹಾವಳಿ ವಿಪರೀತವಾಗುತ್ತಿದೆ. ಕೇವಲ ಒಬ್ಬನೇ ಒಬ್ಬ ಗೃಹರಕ್ಷಕ ದಳದ ಸಿಬ್ಬಂದಿಯನ್ನು ನೇಮಕ ಮಾಡಿದ್ದಾರೆ. ಅವರು ಸಂಜೆಯೇ ತೆರಳುವ ಕಾರಣ ಜಲಾಶಯದ ಬಳಿ ಅಪಾಯಕಾರಿ ಪರಿಸ್ಥಿತಿ ಇದೆ. ಹೀಗಾಗಿ ಕೈಗಾರಿಕೆ ಭದ್ರತಾ ಪಡೆಯ ನಿಗಾ ಅತ್ಯಾವಶ್ಯಕವಾಗಿದೆ’ ಎಂದರು.

‘ಜಲಾಶಯದ ಮುಂದೆ ಕಣಿವೆ ಮಾರಮ್ಮ ಐತಿಹಾಸಿಕ ದೇವಸ್ಥಾನವಿದ್ದು, ಈ ದೇವಸ್ಥಾನಕ್ಕೆ ಪ್ರತಿದಿನ ಅಪಾರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ. ವಿವಿಧೆಡೆ ಅನೈತಿಕ ಚಟುವಟಿಕೆಗಳು ಸಹ ನಡೆಯುತ್ತಿವೆ. ಹೀಗಾಗಿ ಜಲಾಶಯಕ್ಕೆ ಸೂಕ್ತ ಭದ್ರತೆ ಒದಗಿಸಬೇಕು’ ಎಂದು ಒತ್ತಾಯಿಸಿದರು.

ಕಾರ್ಯಾಧ್ಯಕ್ಷ ಸತೀಶ್ ಕೋಟೆ, ಕಾರ್ಯದರ್ಶಿ ರಂಗಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-44-1140065645

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.