ಚಿತ್ರದುರ್ಗ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ಚುನಾವಣಾ ಆಯೋಗ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುತ್ತಿದೆ ಎಂದು ಆರೋಪಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟದ ಸದಸ್ಯರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರವಾಸಿ ಮಂದಿರದ ಆವರಣದಲ್ಲಿ ಸೇರಿದ ಮುಖಂಡರು, ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು. ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಧಿಕ್ಕಾರ ಕೂಗಿದರು.

‘ಅರ್ಹ ಮತದಾರರನ್ನು ಮತಪಟ್ಟಿಗೆ ಸೇರಿಸುವುದು ಮತದಾರರ ಪಟ್ಟಿ ಪರಿಷ್ಕರಣೆಯ ಉದ್ದೇಶವಾಗಬೇಕು. ಆದರೆ, ಚುನಾವಣಾ ಆಯೋಗ ವಿವಿಧ ನೆಪ ನೀಡಿ ಅರ್ಹರನ್ನೂ ಪಟ್ಟಿಯಿಂದ ಹೊರಗಿಡುವ ಕೆಲಸ ಮಾಡುತ್ತಿದೆ. ಪಶ್ಚಿಮ ಬಂಗಾಳದಲ್ಲಿ 80 ಲಕ್ಷಕ್ಕೂ ಹೆಚ್ಚು ಮತದಾರರನ್ನು ಪಟ್ಟಿಯಿಂದ ಹೊರಗಿಟ್ಟಿದೆ. ಇದೇ ಕಾರಣದಿಂದ ಅಲ್ಲಿ ಬಿಜೆಪಿ ಗೆಲುವು ಸಾಧಿಸಿದೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹೆಸರಿನಲ್ಲಿ ಕೇಂದ್ರ ಚುನಾವಣಾ ಆಯೋಗ ಸಣ್ಣ– ಪುಟ್ಟ ತಪ್ಪುಗಳನ್ನು ಹುಡುಕಿ ಅರ್ಹ ಮತದಾರರನ್ನು ಮತಪಟ್ಟಿಯಿಂದ ಹೊರ ದಬ್ಬುತ್ತಿದೆ. ವಿವಿಧ ರಾಜ್ಯಗಳಲ್ಲಿ 12 ಕೋಟಿ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದ್ದು, ಕೂಡಲೇ ಎಸ್ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಬೇಕು’ ಎಂದು ಒತ್ತಾಯಿಸಿದರು.

‘ದೇಶದ ಪ್ರತಿಯೊಬ್ಬ ಪ್ರಜೆಯೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂಬುದು ಸಂವಿಧಾನದ ಉದ್ದೇಶವಾಗಿದೆ. ಆದರೆ, ಸರ್ಕಾರ ಏಕಾಏಕಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗದ ಮತದಾರರನ್ನು ಗುರಿಯಾಗಿಸಿಕೊಂಡು ಮತ ಪಟ್ಟಿಯಿಂದ ಹೊರತೆಗೆಯುವ ಹುನ್ನಾರ ನಡೆಸುತ್ತಿದೆ. ಚುನಾವಣಾ ಆಯೋಗ ಮತಪಟ್ಟಿ ಪರಿಷ್ಕರಣೆ ನಿಲ್ಲಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

‘ನಿಜವಾದ ಮತದಾರರ ಹೆಸರುಗಳು ಮತಪಟ್ಟಿಯಲ್ಲಿ ಇಲ್ಲವಾದರೆ ಸರ್ಕಾರದ ಯಾವುದೇ ಸೌಲಭ್ಯಗಳು ಸಿಗುವುದಿಲ್ಲ. ಬಹುಮುಖ್ಯವಾಗಿ ರೇಷನ್ ಕಾರ್ಡ್ಗಳು ಇಲ್ಲದಂತಾಗುತ್ತದೆ. ಬ್ಯಾಂಕ್ ಖಾತೆಯಲ್ಲಿ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತವೆ. 324ನೇ ವಿಧಿ ಪ್ರಕಾರ ಚುನಾವಣಾ ಆಯೋಗಕ್ಕೆ ಮತಪಟ್ಟಿ ಪರಿಷ್ಕರಣೆ ಮಾಡುವ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ಹೇಳಿರುವುದಕ್ಕೆ ನಮ್ಮದೇನೂ ಅಭ್ಯಂತರವಿಲ್ಲ. ಆದರೆ, ಇಲ್ಲಸಲ್ಲದ ಕಾರಣಗಳನ್ನು ಹುಡುಕಿ ಅರ್ಹರನ್ನು ಮತಪಟ್ಟಿಯಿಂದ ಹೊರ ಹಾಕುವುದು ಯಾವ ನ್ಯಾಯ’ ಎಂದು ಪ್ರಶ್ನಿಸಿದರು.

‘ಬಿ.ಆರ್.ಅಂಬೇಡ್ಕರ್ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ದುರುಪಯೋಗ ಮಾಡಿಕೊಂಡು ಮತದಾನದ ಹಕ್ಕು ಕಸಿದುಕೊಳ್ಳುತ್ತಿದೆ. ಮತಪಟ್ಟಿಯಲ್ಲಿ ಏನಾದರೂ ತಪ್ಪುಗಳು, ಲೋಪದೋಷಗಳಿದ್ದರೆ ಸರಿಪಡಿಸಿಕೊಳ್ಳಲು ಮತದಾರರಿಗೆ ಕಾಲಾವಕಾಶ ನೀಡಬೇಕು. ಅದನ್ನು ಬಿಟ್ಟು ಏಕಾಏಕಿ ಎಸ್ಐಆರ್ ಹೆಸರಿನಲ್ಲಿ ಹೆಸರು ತೆಗೆದು ಹಾಕುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ‘ದೇಶದಲ್ಲಿರುವ ಪ್ರತಿಯೊಬ್ಬ ಪ್ರಜೆಯೂ ಭಾರತದ ನಿವಾಸಿ ಎನ್ನುವುದನ್ನು ಸಾಬೀತು ಪಡಿಸುವ ಅಧಿಕಾರ ಚುನಾವಣಾ ಆಯೋಗಕ್ಕಿಲ್ಲ. ಎಸ್ಐಆರ್ ಮೂಲಕ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುವುದರ ಹಿಂದೆ ಕೇಂದ್ರ ಸರ್ಕಾರದ ಕುತಂತ್ರವಿದೆ. ನರೇಂದ್ರ ಮೋದಿ ಸರ್ಕಾರ ಚುನಾವಣಾ ಆಯೋಗ, ಸಿಬಿಐ ಮುಂತಾದ ಸ್ವತಂತ್ರ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ’ ಎಂದು ದೂರಿದರು.

ಪ್ರತಿಭಟನಕಾರರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಎದ್ದೇಳು ಕರ್ನಾಟಕ ಜಿಲ್ಲಾ ಘಟಕದ ಸಂಚಾಲಕ ಜೆ. ಯಾದವರೆಡ್ಡಿ, ಮುಖಂಡರಾದ ಎಂ.ಕೆ.ತಾಜ್ಪೀರ್, ಶಿವು ಯಾದವ್, ಟಿಪ್ಪುಖಾಸಿಂ ಆಲಿ, ನಜ್ಮತಾಜ್, ಎಸ್.ಎನ್. ರವಿಕುಮಾರ್, ಕೆ.ಪಿ. ಸಂಪತ್ಕುಮಾರ್, ಡಿ.ಎನ್. ಮೈಲಾರಪ್ಪ, ಎನ್.ಡಿ. ಕುಮಾರ್, ಸೈಯದ್ ಮೋಹಿದ್ದೀನ್, ಸೈಯದ್ ಖುದ್ದೂಸ್, ಪಿ.ಬಾಬು, ಗೀತಾ ನಂದಿನಿಗೌಡ, ಬಸಮ್ಮ, ಸಿ.ಟಿ. ರಾಜೇಶ್, ಟಿ. ಶಫಿವುಲ್ಲಾ, ಶಿವಕುಮಾರ್, ಆರ್. ಶಿವಣ್ಣ, ಪುರುಷೋತ್ತಮ, ಪಿ. ಸುಬಾನುಲ್ಲಾ, ಎಸ್.ಲಕ್ಷ್ಮಿಕಾಂತ್, ಗುರುನಾಥ್, ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಕೆ.ಪಿ.ಭೂತಯ್ಯ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಬೈಲಮ್ಮ, ಪ್ರಭಾವತಿ, ಸುಧಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-44-455483620

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.