ಚಿತ್ರದುರ್ಗ: ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ಚುನಾವಣಾ ಆಯೋಗ ಅರ್ಹ ಮತದಾರರನ್ನು ಮತಪಟ್ಟಿಯಿಂದ ಹೊರ ಹಾಕುವ ಕೆಲಸ ಮಾಡುತ್ತಿರುವುದನ್ನು ಖಂಡನೀಯ. ಚುನಾವಣಾ ಆಯೋಗದ ಕ್ರಮ ಖಂಡಿಸಿ ಮೇ 30ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಎದ್ದೇಳು ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ಸಂಚಾಲಕ ಜೆ.ಯಾದವರೆಡ್ಡಿ ಹೇಳಿದರು.

‘ಮತದಾರರ ಪಟ್ಟಿಯ ಪರಿಷ್ಕರಣೆ ಈ ಹಿಂದೆಯೂ ಇತ್ತು. ಇದು ಹೊಸದೇನಲ್ಲ. ಸಂವಿಧಾನದ 324ನೇ ವಿಧಿ ಅನ್ವಯ ಪರಿಷ್ಕರಣೆಗೆ ಚುನಾವಣಾ ಆಯೋಗಕ್ಕೆ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ ಈಗಿನ ಪರಿಷ್ಕರಣೆಯಿಂದ ಅರ್ಹ ಮತದಾರರು ಮತದಾನದ ಹಕ್ಕು ಕಳೆದುಕೊಳ್ಳುತ್ತಿದ್ದಾರೆ. ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಲ್ಪಸಂಖ್ಯಾತರು, ದಲಿತರು ಮತದಾನದ ಹಕ್ಕು ಕಳೆದುಕೊಂಡಿದ್ದಾರೆ. ಇದರಿಂದ ಪ್ರಜಾಪ್ರಭುತ್ವ ನಾಶವಾಗಿ ಅರಾಜಕತೆ ಸೃಷ್ಟಿಯಾಗುವ ಅಪಾಯವಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ದುರುಪಯೋಗ ಮಾಡಿಕೊಳ್ಳುತ್ತಿರುವುದು ಘನಘೋರ ಅಪರಾಧ. ದೇಶದ ವ್ಯವಸ್ಥೆಯೇ ದೇಶದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಕಟ್ಟ ಕಡೆಯ ಮನುಷ್ಯನೂ ಮತದಾನದ ಹಕ್ಕು ಚಲಾಯಿಸುವಂತೆ ನ್ಯಾಯ ಕೊಡಿಸುವುದು ಆಳುವ ಸರ್ಕಾರಗಳ ಧ್ಯೇಯವಾಗಬೇಕು. ರಾಜ್ಯದಲ್ಲಿ ಕೂಡ ಎಸ್ಐಆರ್ ಆರಂಭವಾಗಿದ್ದು ಅರ್ಹ ಮತದಾರರನ್ನು ಮತಪಟ್ಟಿಯಿಂದ ಹೊರಗಿಟ್ಟರೆ ರಾಜ್ಯದಾದ್ಯಂತ ಹೋರಾಟಗಳು ನಡೆಯಲಿವೆ’ ಎಂದು ಎಚ್ಚರಿಸಿದರು.

ನಿವೃತ್ತ ಪ್ರಾಚಾರ್ಯ ಶಿವಕುಮಾರ್ ಮಾತನಾಡಿ, ‘ಮತದಾರರ ಪಟ್ಟಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಿ ಮತದಾನದ ಹಕ್ಕು ನೀಡುವುದು ಚುನಾವಣಾ ಆಯೋಗದ ಉದ್ದೇಶವಾಗಬೇಕು. ಈಗಿನ ಎಸ್ಐಆರ್ ಪ್ರಕ್ರಿಯೆ ಜನದ್ರೋಹಿಯಾಗಿ ರೂಪಾಂತರಗೊಂಡಿದೆ. ಸಮಗ್ರ ಪರಿಷ್ಕರಣೆಗೆ ಚುನಾವಣಾ ಆಯೋಗಕ್ಕೆ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ಹೇಳಿರುವುದನ್ನು ಮತ್ತೊಮ್ಮೆ ಪರಾಮರ್ಶಿಸುವುದು ಒಳ್ಳೆಯದು’ ಎಂದರು.

ಜನಶಕ್ತಿ ಸದಸ್ಯ ಟಿ.ಶಫೀವುಲ್ಲಾ, ಮುಖಂಡರಾದ ರವಿಕುಮಾರ್, ಧನಂಜಯ ಹಂಪಯ್ಯನಮಾಳಿಗೆ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-44-526786518

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.