ಚಿತ್ರದುರ್ಗ: ‘ನಗರಸಭೆ ಸೇರಿದಂತೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿಯಮಾನುಸಾರ ಹಾಗೂ ವೈಜ್ಞಾನಿಕವಾಗಿ ಘನತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಕಸ ಎಸೆಯುವ ಜಾಗಗಳನ್ನು ಗುರುತಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಘನತ್ಯಾಜ್ಯ ನಿರ್ವಹಣೆ ನಿಯಮ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಕಸ ಎಸೆಯುವ ಜಾಗದಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ನಿಯಮ ಮೀರಿ ಕಸ ಹಾಕುವವರಿಂದ ದಂಡ ವಸೂಲಿ ಮಾಡಬೇಕು’ ಎಂದು ಸೂಚಿಸಿದರು.

‘ತ್ಯಾಜ್ಯ ವಿಲೇವಾರಿ ಪ್ರಕ್ರಿಯೆಯನ್ನು ಆರಂಭಿಕ ಹಂತದಿಂದಲೇ ವ್ಯವಸ್ಥಿತವಾಗಿ ನಿರ್ವಹಿಸಬೇಕು. ಹೆಚ್ಚಿನ ಪ್ರಮಾಣದಲ್ಲಿ ಕಸ ಉತ್ಪತ್ತಿ ಮಾಡುವ ಸಂಸ್ಥೆಗಳು ತಮ್ಮ ಆವರಣದಲ್ಲೇ ಕಸ ವಿಲೇವಾರಿಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಸ್ವಲ್ಪ ಕಾಲಾವಕಾಶ ನೀಡಿ. ಸ್ಥಳೀಯ ಸಂಸ್ಥೆಗಳು ಅವರಿಗೆ ಸಹಾಯ ಮಾಡಬೇಕು’ ಎಂದರು.

‘ನಿಗದಿತ ಸಮಯದಲ್ಲಿ ಕಸ ವಿಲೇವಾರಿಗೆ ಸ್ವಂತ ವ್ಯವಸ್ಥೆ ಮಾಡಿಕೊಳ್ಳದಿದ್ದರೆ ದಂಡ ವಿಧಿಸುವುದು ಮಾತ್ರವಲ್ಲದೆ, ಇತರೆ ನಾಗರಿಕ ಸೌಲಭ್ಯಗಳನ್ನು ಕಡಿತಗೊಳಿಸಲು ನ್ಯಾಯಾಲಯದ ನಿರ್ದೇಶನ ಇರುವ ಬಗ್ಗೆ ಕಸ ಉತ್ಪತ್ತಿ ಮಾಡುವ ಸಂಸ್ಥೆಗಳಿಗೆ ಮನವರಿಕೆ ಮಾಡಿಕೊಡಬೇಕು. ಮನೆಗಳು ಹಾಗೂ ವಾಣಿಜ್ಯ ಮಳಿಗೆಗಳಿಂದ ಸಂಗ್ರಹಿಸುವ ಕಸವನ್ನು ಹಸಿ ಮತ್ತು ಒಣ ಕಸ ಎಂದು ಮೂಲದಲ್ಲೇ ಪ್ರತ್ಯೇಕಿಸಬೇಕು. ಕಸ ಸಂಗ್ರಹಣಾ ವಾಹನಗಳು ಕಡ್ಡಾಯವಾಗಿ ವಿಂಗಡಿಸಿದ ಕಸವನ್ನೇ ಪಡೆಯಬೇಕು. ಆರಂಭದಲ್ಲೇ ವಿಂಗಡಣೆ ಸರಿಯಾಗಿ ನಡೆದರೆ, ಅಂತಿಮ ವಿಲೇವಾರಿ ಸುಲಭವಾಗುತ್ತದೆ’ ಎಂದು ಹೇಳಿದರು.

‘ಪತ್ರಿಕೆಗಳಲ್ಲಿ ಕಸ ನಿರ್ವಹಣೆ ಕುರಿತು ವರದಿ ಪ್ರಕಟವಾದರೆ ಅವುಗಳನ್ನು ನ್ಯಾಯಾಲಯಗಳು ಗಂಭೀರವಾಗಿ ಪರಿಗಣಿಸಲಿವೆ. ಸ್ಥಳೀಯ ಸಂಸ್ಥೆಗಳ ಮೂಲ ಕರ್ತವ್ಯವೇ ಸ್ವಚ್ಛತೆ ಕಾಪಾಡುವುದು. ವಾಹನಗಳು ಅಥವಾ ಸಿಬ್ಬಂದಿ ಕೊರತೆಯಿದ್ದರೆ, ಸರ್ಕಾರದ ಅನುದಾನಕ್ಕೆ ಕಾಯದೆ ಸ್ಥಳೀಯ ಸಂಸ್ಥೆಗಳ ಸ್ವಂತ ನಿಧಿ ಅಥವಾ 15ನೇ ಹಣಕಾಸು ಯೋಜನೆಯಡಿ ಅಗತ್ಯ ಸೌಕರ್ಯಗಳನ್ನು ಬಲಪಡಿಸಿಕೊಂಡು ನಿಯಮಾನುಸಾರ ತ್ಯಾಜ್ಯ ವಿಲೇವಾರಿ ಮಾಡಬೇಕು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಲಭ್ಯವಿರುವ ಕಸ ಮರುಬಳಕೆ ಮಾಡುವ ಏಜೆನ್ಸಿಗಳ ಪಟ್ಟಿ ಸಿದ್ಧಪಡಿಸಬೇಕು. ಒಂದು ವೇಳೆ ಸ್ಥಳೀಯವಾಗಿ ಏಜೆನ್ಸಿಗಳು ಇಲ್ಲದಿದ್ದರೆ, ನೆರೆ ಜಿಲ್ಲೆಗಳ ಏಜೆನ್ಸಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು. ಈ ಪ್ರಕ್ರಿಯೆಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ನೆರವು ಪಡೆಯಬೇಕು’ ಎಂದು ಸೂಚಿಸಿದರು.

‘ನಗರದ ಘನತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಕೋಟಿಗಟ್ಟಲೆ ಮೌಲ್ಯದ ಯಂತ್ರೋಪಕರಣಗಳನ್ನು ಸುಸ್ಥಿತಿಯಲ್ಲಿಟ್ಟುಕೊಂಡು, ಕಸ ವಿಲೇವಾರಿ ಪ್ರಕ್ರಿಯೆ ನಿರಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಕರ್ತವ್ಯ. ಸಿಬ್ಬಂದಿ ಹಾಜರಾತಿಗಾಗಿ ತಕ್ಷಣವೇ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ತರಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಕೆ.ಜಯಲಕ್ಷ್ಮಿ, ಪರಿಸರ ಅಧಿಕಾರಿ ಎಚ್.ವಿ.ಪಲ್ಲವಿ, ಪೌರಾಯುಕ್ತೆ ಲಕ್ಷ್ಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-44-1710787205

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.