ಚಿತ್ರದುರ್ಗ: ಜಿಲ್ಲೆಯ ವಿವಿಧೆಡೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು ಸಾರ್ವಜನಿಕರು ಪರದಾಡುತ್ತಿದ್ದಾರೆ. ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸದ ಕಾರಣ ಸಾರ್ವಜನಿಕರು ಸ್ಥಳೀಯ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕಳೆದೊಂದು ವಾರದಿಂದ ಜಿಲ್ಲೆಯ 4 ಕಡೆಗಳಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಜನರು ಪ್ರತಿಭಟನೆ ನಡೆಸಿದ್ದಾರೆ. ಸಂಸದ ಗೋವಿಂದ ಕಾರಜೋಳ ಈಚೆಗೆ ಅಧಿಕಾರಿಗಳ ಸಭೆ ನಡೆಸಿ ಕುಡಿಯುವ ನೀರಿಗಾಗಿ ಸಾರ್ವಜನಿಕರಿಂದ ವ್ಯಾಪಕ ದೂರು ಬರುತ್ತಿರುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ಜನರ ಸಮಸ್ಯೆಗೆ 24 ಗಂಟೆಯೊಳಗೆ ಸ್ಪಂದಿಸುವಂತೆ ಸೂಚಿಸಿದ್ದಾರೆ. ಸೂಚನೆಗೆ ಅಧಿಕಾರಿಗಳು ಗಮನ ಹರಿಸದ್ದರಿಂದ ಗ್ರಾಮೀಣ ಭಾಗದ ಜನರ ಪರದಾಟ ಮುಂದುವರಿದಿದೆ.

ಬಿರು ಬೇಸಿಗೆಯ ಕಾರಣ ಗ್ರಾಮೀಣ ಭಾಗದ ಕೊಳವೆಬಾವಿಗಳಲ್ಲಿನ ನೀರು ತಳ ಮುಟ್ಟಿದೆ. ಹಲವೆಡೆ ಗ್ರಾಮ ಪಂಚಾಯಿತಿಗಳಿಂದ ಪೂರೈಸುತ್ತಿದ್ದ ಕುಡಿಯುವ ನೀರಿನ ವ್ಯವಸ್ಥೆಯೇ ಸ್ಥಗಿತಗೊಂಡಿದೆ. ಸಾರ್ವಜನಿಕರು ತಳ್ಳುವ ಗಾಡಿಗಳಲ್ಲಿ ಬಿಂದಿಗೆ ತುಂಬಿಕೊಂಡು ಜಲಮೂಲ ಹುಡುಕುತ್ತಿದ್ದಾರೆ. ಬಹಳಷ್ಟು ದೂರ ಸಾಗಿ ನೀರು ತರಬೇಕಾದ ಪರಿಸ್ಥಿತಿ ಇದೆ. ಬಹುತೇಕ ಕಡೆ ನೀರು ಶುದ್ಧೀಕರಣ ಘಟಕಗಳೂ ಹಾಳಾಗಿರುವ ಕಾರಣ ಕುಡಿಯುವ ನೀರಿನ ಪರಿಸ್ಥಿತಿ ಜಟಿಲವಾಗಿದೆ.

ಜಿಲ್ಲೆಯಾದ್ಯಂತ 93 ಗ್ರಾಮ ಪಂಚಾಯಿತಿಯ 216 ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಪಟ್ಟಿ ಮಾಡಿದ್ದಾರೆ. ಅವುಗಳ ಪೈಕಿ 52 ಹಳ್ಳಿಗಳಲ್ಲಿ ಮಾತ್ರ ಸಮಸ್ಯೆ ಸೃಷ್ಟಿಯಾಗಿದೆ ಎಂದು ತಿಳಿಸಿದ್ದಾರೆ. ವಾಸ್ತವವಾಗಿ ಜಿಲ್ಲೆಯ 100ಕ್ಕೂ ಅಧಿಕ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.

‘ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಪೂರೈಸಬೇಕಾದದ್ದು ಸ್ಥಳೀಯ ಸಂಸ್ಥೆಯ ಜವಾಬ್ದಾರಿ. ಸಮಸ್ಯೆಯ ಅರಿವಿದ್ದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ. ತಿಂಗಳಿನಿಂದ ನೀರಿಗಾಗಿ ಪರದಾಡುತ್ತಿದ್ದರೂ ಅಧಿಕಾರಿಗಳು ತಿರುಗಿ ನೋಡುತ್ತಿಲ್ಲ. ನಾವು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದೇವೆ’ ಎಂದು ಮಾಡನಾಯಕನಹಳ್ಳಿ ಗ್ರಾಮದ ಮಂಜಪ್ಪ ಹೇಳಿದರು.

3 ಗ್ರಾಮಗಳಿಗೆ ಮಾತ್ರ ಟ್ಯಾಂಕರ್: ಹಲವು ಗ್ರಾಮಗಳಲ್ಲಿ ಕೊಳವೆಬಾವಿಗಳು ಬತ್ತಿ ಹೋಗಿದ್ದು, ಜಲಮೂಲವೇ ಇಲ್ಲ. ಸಾವಿರ ಅಡಿ ಕೊಳವೆಬಾವಿ ಕೊರೆದರೂ ನೀರು ಸಿಗದೇ ಗ್ರಾಮಸ್ಥರು ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾರೆ. ಅಂತಹ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ಸರ್ಕಾರವೇ ಸೂಚಿಸಿದೆ. ಆದರೆ, ಜಿಲ್ಲೆಯಲ್ಲಿ 3 ಗ್ರಾಮಗಳಿಗೆ ಮಾತ್ರ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಹಲವು ಗ್ರಾಮಸ್ಥರು ಟ್ಯಾಂಕರ್ ಕಳಿಸಿ ಎಂದು ಮೊರೆ ಇಡುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ದೂರುತ್ತಾರೆ.

ಹಿರಿಯೂರು ತಾಲ್ಲೂಕಿನ ಕುಂಟಪ್ಪನಹಟ್ಟಿ, ಹೊಳಲ್ಕೆರೆ ತಾಲ್ಲೂಕಿನ ರಂಗಾಪುರ ಲಂಬಾಣಿಹಟ್ಟಿ, ಆರ್.ನುಲೇನೂರು ಲಂಬಾಣಿ ಹಟ್ಟಿಗೆ ಮಾತ್ರ ಟ್ಯಾಂಕರ್ ಕಳುಹಿಸಲಾಗುತ್ತಿದೆ. ಉಳಿದಂತೆ ಹಲವು ಹಳ್ಳಿಗಳಿಗೆ ನೀರಿನ ಬೇಡಿಕೆ ಇದ್ದರೂ ಟ್ಯಾಂಕರ್ ಕಳುಹಿಸದ ಕಾರಣ ಗ್ರಾಮಸ್ಥರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಜಿಲ್ಲೆಯಾದ್ಯಂತ 1,045 ನೀರು ಶುದ್ಧೀಕರಣ ಘಟಕಗಳಿದ್ದು, 300 ಸ್ಥಗಿತಗೊಂಡಿವೆ ಎಂದು ಮೂಲಗಳು ತಿಳಿಸಿವೆ. ಆದರೆ, ಅಧಿಕಾರಿಗಳ ಮಾಹಿತಿ ಪ್ರಕಾರ 133 ಘಟಕಗಳು ಸ್ಥಗಿತಗೊಂಡಿದ್ದು, 80 ದುರಸ್ತಿ ಹಂತದಲ್ಲಿವೆ. ಬೇಸಿಗೆಯಲ್ಲಿ ಈ ಘಟಕಗಳನ್ನು ಪಂಚಾಯಿತಿ ಅಧಿಕಾರಿಗಳು ವಶಕ್ಕೆ ಪಡೆಯದ ಕಾರಣ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಉಲ್ಭಣಗೊಂಡಿದೆ.

‘ಕುಡಿಯುವ ನೀರಿಗಾಗಿ ಜಿಲ್ಲಾ ಮಟ್ಟದಲ್ಲಿ ತೆರೆದಿರುವ ಸಹಾಯವಾಣಿಗೆ ಕರೆ ಮಾಡಿದರೆ ಸ್ಪಂದಿಸುವುದಿಲ್ಲ. ನಿತ್ಯ ಕರೆ ಮಾಡಿ ಮಾಹಿತಿ ಕೊಟ್ಟರೂ ಕ್ರಮ ಇಲ್ಲ. ಅಧಿಕಾರಿಗಳು ಹಳ್ಳಿಗಳ ಕಡೆ ತಿರುಗಿ ನೋಡದ ಕಾರಣ ಹಾಹಾಕಾರ ಇದೆ’ ಎಂದು ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-44-1138619078

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.