ಚಿತ್ರದುರ್ಗ: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯಕ್ಕೆ ಕಾಲಿಟ್ಟು 50 ವರ್ಷ ತುಂಬಿರುವ ಸಂಭ್ರಮದಲ್ಲಿ ಮೇ 9ರಂದು ನಗರದಲ್ಲಿ ನಡೆಯುವ ‘ಯಡಿಯೂರಪ್ಪ ಅಭಿಮಾನೋತ್ಸವ’ ಕಾರ್ಯಕ್ರಮದ ವೇದಿಕೆ ನಿರ್ಮಾಣಕ್ಕೆ ಭಾನುವಾರ ಭೂಮಿಪೂಜೆ ನೆರವೇರಿಸಲಾಯಿತು.

ನಗರದ ಮಾದಾರ ಚನ್ನಯ್ಯ ಗುರುಪೀಠದ ಸಮೀಪದ ವಿಶಾಲ ಪ್ರದೇಶದಲ್ಲಿ ಬೃಹತ್ ವೇದಿಕೆ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಗೋಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದ ಬಳಿಕ ವಾಸ್ತು ಪೂಜೆ ಮಾಡಲಾಯಿತು.

ಬಳಿಕ ವೇದಿಕೆಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ‘ಯಡಿಯೂರಪ್ಪ ಅವರು ರಾಜ್ಯದ ರೈತರು, ಬಡವರು, ದಲಿತರ ಪರವಾಗಿ ಹೋರಾಡಿದ್ದಾರೆ. ಸಾಮಾಜಿಕ ನ್ಯಾಯಕ್ಕಾಗಿ ದುಡಿದಿದ್ದಾರೆ. ಅವರ ಈ 50 ವರ್ಷಗಳ ಸಾರ್ಥಕ ರಾಜಕೀಯ ಜೀವನಕ್ಕೆ ಗೌರವ ಸಲ್ಲಿಸುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

‘ಚಿತ್ರದುರ್ಗವು ಕರ್ನಾಟಕದ ಕೇಂದ್ರಬಿಂದು. ಹೀಗಾಗಿ ಕಾರ್ಯಕ್ರಮ ಆಯೋಜನೆಗೆ ಆ ನಗರವನ್ನು ಆಯ್ಕೆ ಮಾಡಿಕೊಳ್ಳಲಾಯಿತು. ರಾಜ್ಯದ ಮೂಲೆ–ಮೂಲೆಯಿಂದಲೂ ಯಡಿಯೂರಪ್ಪ ಅವರ ಅಭಿಮಾನಿಗಳು ಕಾರ್ಯಕ್ರಮಕ್ಕೆ ಬರಲಿದ್ದಾರೆ’ ಎಂದರು.

‘ಯುವ ರಾಜಕಾರಣಿಗಳಿಗೆ ಹಾಗೂ ಯುವ ಪೀಳಿಗೆಗೆ ಯಡಿಯೂರಪ್ಪ ದಾರಿ ದೀಪವಾಗಿದ್ದಾರೆ. ಅವರ 50 ವರ್ಷದ ರಾಜಕೀಯ ಜೀವನ ಮಾರ್ಗದರ್ಶನವಾಗಬೇಕಿದೆ. ಛಲಕ್ಕೆ ಮತ್ತೊಂದು ಹೆಸರಾಗಿದ್ದು, ಜನ ಸೇವೆಗಾಗಿಯೇ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ’ ಎಂದು ತಿಳಿಸಿದರು.

‘ಅಧಿಕಾರಕ್ಕಾಗಿಯೇ ಅವರು ಹೋರಾಟ ಮಾಡಲಿಲ್ಲ. ಬಡವರ ಕಣ್ಣೀರನ್ನು ಒರೆಸುವ ಸಲುವಾಗಿ ಕೆಲಸ ಮಾಡಿದ್ದಾರೆ. ಸೈಕಲ್ ಮೇಲೆ ರಾಜ್ಯ ಪ್ರವಾಸ ಮಾಡಿ, ಪಕ್ಷವನ್ನು ಕಟ್ಟಿ ಬೆಳೆಸಿದರು. ಅವರ ಶ್ರಮದಿಂದ ಇಂದು ನಾವುಗಳು ಅಧಿಕಾರ ಪಡೆದಿದ್ದೇವೆ’ ಎಂದರು.

‘ರಾಜಕಾರಣಿ ಎಂದರೆ ಯಾವ ರೀತಿ ಇರಬೇಕು ಎಂಬುದನ್ನು ಬಿಎಸ್ವೈ ಅವರನ್ನು ನೋಡಿ ಕಲಿಯಬೇಕಿದೆ. ನುಡಿದಂತೆ ನಡೆದ ವ್ಯಕ್ತಿ ಯಾಗಿದ್ದಾರೆ. ಇಂತಹ ವ್ಯಕ್ತಿತ್ವಕ್ಕೆ ಗೌರವ ಸಲ್ಲಿಸುವ ಕ್ಷಣ ನಮ್ಮದಾಗಿದೆ. ಈ ಕಾರ್ಯಕ್ರಮ ಇತಿಹಾಸದ ಪುಟದಲ್ಲಿ ಸುರ್ವಣಾಕ್ಷರದಲ್ಲಿ ದಾಖಲಾಗಬೇಕು’ ಎಂದು ತಿಳಿಸಿದರು.

‘ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಚಿತ್ರದುರ್ಗ ಇದೀಗ ತವರು ಮನೆಯಾಗಿದ್ದು, ಎಲ್ಲಿಯೂ ಲೋಪವಾಗದಂತೆ ಕಾರ್ಯಕ್ರಮ ನಡೆಯಬೇಕು’ ಎಂದು ವಿರೋಧ ಪಕ್ಷದ ನಾಯಕ ಆರ್.ಆಶೋಕ್ ಹೇಳಿದರು.

‘ನಾಡಿಗೆ ಯಡಿಯೂರಪ್ಪ ನೀಡಿದ ಕೊಡುಗೆಗೆ ಎಲ್ಲ ವರ್ಗದವರ ಮೆಚ್ಚುಗೆಗೆ ಪಾತ್ರವಾಗಿವೆ. ಇದಕ್ಕಾಗಿ ಕಾರ್ಯಕ್ರಮ ಅರ್ಥಪೂರ್ಣವಾಗಬೇಕು. ರಾಜ್ಯದ ಮೂಲೆಮೂಲೆಗಳಿಂದ ಅಭಿಮಾನಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಬರಲಿದ್ದಾರೆ. ಐತಿಹಾಸಿಕ ಕ್ಷಣಕ್ಕೆ ಈ ನೆಲ ಸಾಕ್ಷಿಯಾಗಲಿದೆ’ ಎಂದರು.

ಸಂಸದ ಗೋವಿಂದ ಕಾರಜೋಳ ಮಾತನಾಡಿ, ‘ಏಕಾಂಗಿಯಾಗಿ ಹೋರಾಟ ನಡೆಸಿ ಪಕ್ಷಕ್ಕೆ ಭದ್ರ ಬುನಾದಿ ಹಾಕಿದ ಕೀರ್ತಿ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ರಾಜ್ಯದ ಪ್ರತಿ ಗ್ರಾಮದಿಂದ ಜನರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತದೆ. ಇದು ಮನೆಯ ಸಂಭ್ರಮ. ಇಂದಿನಿಂದ ಪ್ರತಿಯೊಬ್ಬರು ಜವಾಬ್ದಾರಿಯಿಂದ ತಮಗೆ ವಹಿಸಿದ ಕೆಲಸ ನಿಭಾಯಿಸಬೇಕು’ ಎಂದು ತಿಳಿಸಿದರು.

‘ರಾಜ್ಯದ ಸಕಲ ಮಠಾಧೀಶರು ಭಾಗವಹಿಸಲಿದ್ದಾರೆ. ಈಗಾಗಲೇ ನಿರಂತರ ಸಭೆ ನಡೆಸಿ ಸಿದ್ಧತೆ ನಡೆಸಲಾಗಿದೆ. ಇದು ನಮ್ಮೆಲ್ಲರ ಕಾರ್ಯಕ್ರಮವಾಗಬೇಕು. ಈ ಮೂಲಕ ನಮ್ಮ ನಾಯಕನನ್ನು ಗೌರವಿಸುವ ಕಾರ್ಯ ಆಗಬೇಕು’ ಎಂದರು.

‘ಚುನಾವಣೆಗೆ ಒಂದು ವರ್ಷ ಇದ್ದಂತೆ ದಾವಣಗೆರೆಯಲ್ಲಿ ನಡೆದ ಆ ಕಾರ್ಯಕ್ರಮ (ಸಿದ್ದರಾಮೋತ್ಸವ) ಕಾಂಗ್ರೆಸ್ಗೆ ಶಕ್ತಿ ನೀಡಿತು. ಆದರೆ, ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿಯಿದ್ದು, ಈ ವೇದಿಕೆಯಿಂದ ಪ್ರಾರಂಭವಾಗುವ ಶಕ್ತಿ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರುವಂತಾಗಬೇಕು’ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕರೆ ನೀಡಿದರು.

‘ಈ ಅಭಿಮಾನೋತ್ಸವ ಬಿಜೆಪಿಯನ್ನು ಮತ್ತೆ ಅಧಿಕಾರದ ಗದ್ದುಗೆಗೆ ಏರಿಸಲಿದೆ. ಆದ್ದರಿಂದ ಪ್ರತಿಯೊಬ್ಬ ಕಾರ್ಯಕರ್ತರು ವಿರಮಿಸದೇ ಕೆಲಸ ಮಾಡಬೇಕು. ಕಾಂಗ್ರೆಸ್ ಎದೆ ನಡುಗುವಂತೆ ಕಾರ್ಯಕ್ರಮ ನಡೆಯಬೇಕು’ ಎಂದರು.

ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಕಬೀರಾನಂದಾಶ್ರಮದ ಶಿವಲಿಂಗಾನಂದ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಯಾದವ ಗುರುಪೀಠದ ಕೃಷ್ಣಯಾದವನಂದ ಸ್ವಾಮೀಜಿ, ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ, ಮುರುಘಾಮಠದ ಬಸವಪ್ರಭು ಸ್ವಾಮೀಜಿ ಧ್ವಜಾರೋಹಣ ಕಾರ್ಯದಲ್ಲಿ ಭಾಗವಹಿಸಿದ್ದರು.

ಹಿರಿಯ ನಾಯಕರಾದ ಜಿ.ಎಂ.ಸಿದ್ದೇಶ್ವರ, ಬಿ.ಸಿ.ಪಾಟೀಲ್, ಎ.ನಾರಾಯಣಸ್ವಾಮಿ, ಎನ್.ರವಿಕುಮಾರ್, ಜಿ.ಎಚ್.ತಿಪ್ಪಾರೆಡ್ಡಿ, ರೇಣುಕಾಚಾರ್ಯ, ಎನ್.ಮಹೇಶ್, ಮುನಿರತ್ನ, ಹರತಾಳು ಹಾಲಪ್ಪ, ಕೆ.ಎಸ್.ನವೀನ್, ರೂಪಾಲಿನಾಯ್ಕ್, ಸಂಜಯ್ ಪಾಟೀಲ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಸೇರಿದಂತೆ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-44-691305421

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.