ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸೇರಿದ ಜಿಲ್ಲಾ ಪಂಚಾಯಿತಿ ಸದಸ್ಯೆ

Last Updated 28 ಡಿಸೆಂಬರ್ 2020, 13:11 IST
ಅಕ್ಷರ ಗಾತ್ರ

ಚಿತ್ರದುರ್ಗ: ತಾಲ್ಲೂಕಿನ ಹಿರೇಗುಂಟನೂರು ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಎಸ್.ಜಯಪ್ರತಿಭಾ ಹಾಗೂ ಪತಿ ವಿ.ಪಾಳ್ಯದ ಮುಖಂಡ ನವೀನ್‌ಕುಮಾರ್‌ ಅವರು ಬೆಂಬಲಿಗರೊಂದಿಗೆ ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಹಾಗೂ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಅವರು ಜಯಪ್ರತಿಭಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಇವರು ಜಿಲ್ಲಾ ಪಂಚಾಯಿತಿಯ ಪಕ್ಷೇತರ ಸದಸ್ಯರಾಗಿದ್ದರು.

‘ಜಯಪ್ರತಿಭಾ ಅವರು ಮೊದಲಿನಿಂದಲೂ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಳ್ಳುವ ಇಂಗಿತ ವ್ಯಕ್ತಪಡಿಸಿದ್ದರಿಂದ ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಜನಪರ ಕೆಲಸವನ್ನು ಮೆಚ್ಚಿ ಪಕ್ಷಕ್ಕೆ ಬಂದಿದ್ದಾರೆ’ ಎಂದು ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ತಿಳಿಸಿದರು.

ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ‘ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಕುಂಠಿತಗೊಂಡಿತ್ತು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯ ಅಭಿವೃದ್ಧಿಯತ್ತ ಸಾಗುತ್ತಿದೆ. ಕೊರೊನಾ ಸೋಂಕು ಕಾಣಿಸಿಕೊಂಡು ಸೃಷ್ಟಿಯಾದ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಸರ್ಕಾರ ಜನಪರವಾಗಿ ಕೆಲಸ ಮಾಡಿದೆ’ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರಳಿ, ವಿಭಾಗೀಯ ಪ್ರಭಾರಿ ಜಿ.ಎಂ.ಸುರೇಶ್, ಒಬಿಸಿ ಮೋರ್ಚಾದ ಉಪಾಧ್ಯಕ್ಷ ಸಿದ್ದೇಶ್‍ ಯಾದವ್, ವಕ್ತಾರ ನಾಗರಾಜ್‍ಬೇದ್ರೆ, ಗ್ರಾಮಾಂತರ ಮಂಡಲದ ಅಧ್ಯಕ್ಷ ನಂದಿ ನಾಗರಾಜ್, ತಾಲ್ಲೂಕು ಪಂಚಾಯಿತಿ ಸದಸ್ಯ ಸುರೇಶ್‍ ನಾಯ್ಕ, ಟಿ.ಜಿ.ಅರುಣ್ ಕುಮಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT