ಹಿರಿಯೂರು: ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ತಾಲ್ಲೂಕಿನ ಯರಬಳ್ಳಿ ಗ್ರಾಮ ಪಂಚಾಯಿತಿಯ ಹಿಂದಿನ ಪಿಡಿಒ ಎಸ್.ಬಸವರಾಜು ಹಾಗೂ ಕೆ. ತಿಪ್ಪೇಸ್ವಾಮಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ 7 ದಿನಗಳ ಒಳಗೆ ಪ್ರಾಧಿಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 150 ಎ ರಸ್ತೆ ಅಗಲೀಕರಣ ಕಾಮಗಾರಿಗಾಗಿ ಯರಬಳ್ಳಿ ಎ.ಕೆ. ಕಾಲೊನಿಯ ಅಂಗನವಾಡಿ ಕಟ್ಟಡ ತೆರವುಗೊಳಿಸಲಾಗಿತ್ತು. ಇದಕ್ಕೆ ಸೂಕ್ತ ಪರಿಹಾರವನ್ನೂ ನೀಡಲಾಗಿತ್ತು. ಪಿಡಿಒ ಅವರು ಕಾನೂನು ಉಲ್ಲಂಘಿಸಿ ಪರಿಹಾರ ಹಣ ದುರುಪಯೋಗ ಪಡಿಸಿಕೊಂಡಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷ ಕಂದಿಕೆರೆ ಜಗದೀಶ್ ಮನವಿ ಮಾಡಿದ್ದರು.

ಮನವಿ ಹಿನ್ನೆಲೆಯಲ್ಲಿ ಅಧಿಕಾರಿಗಳು ತನಿಖೆ ಕೈಗೊಂಡಾಗ ಪಿಡಿಒ ಅವರು ಕರ್ತವ್ಯ ಲೋಪ ಎಸಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಜಗದೀಶ್ ಅವರು ಮನವಿ ಮಾಡಿದ್ದರಿಂದ ಜಿಲ್ಲಾಧಿಕಾರಿ ಅವರು ಈ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.