ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ | ಆಶ್ರಯ ಬಡಾವಣೆಯಲ್ಲಿ ವಾಂತಿ-ಭೇದಿ: ಕಾಲರಾ ದೃಢ

Published 22 ಆಗಸ್ಟ್ 2023, 16:19 IST
Last Updated 22 ಆಗಸ್ಟ್ 2023, 16:19 IST
ಅಕ್ಷರ ಗಾತ್ರ

ಚಿತ್ರದುರ್ಗ: ಇಲ್ಲಿನ ಆಶ್ರಯ ಬಡಾವಣೆಯಲ್ಲಿ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಭೇದಿಯ ಮಾದರಿಯಲ್ಲಿ ವಿಬ್ರಿಯೊ ಕಾಲರಾ ಬ್ಯಾಕ್ಟೀರಿಯಾ ಪತ್ತೆಯಾಗಿದೆ.

ಕವಾಡಿಗರಹಟ್ಟಿ ಸಮೀಪದ ಆಶ್ರಯ ಬಡಾವಣೆಯಲ್ಲಿ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಆರು ಜನರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಇವರ ಭೇದಿ ಮಾದರಿಯನ್ನು ಬೆಂಗಳೂರಿನ ವೈದ್ಯಕೀಯ ಕಾಲೇಜು ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು.

ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 240ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು, ಐವರು ಮೃತಪಟ್ಟಿದ್ದರು. ಎರಡು ವಾರಗಳ ಬಳಿಕ ಸಮೀಪದ ಆಶ್ರಯ ಬಡಾವಣೆಯಲ್ಲಿ ಕೂಡ ವಾಂತಿ-ಭೇದಿ ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಇಬ್ಬರ ಭೇದಿಯ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ಪೈಕಿ ಒಬ್ಬರಲ್ಲಿ ವಿಬ್ರಿಯೊ ಕಾಲರಾ ಬ್ಯಾಕ್ಟೀರಿಯಾ ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT