ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ಪ್ರಾರಂಭಿಸಿ

ಅಂಗನವಾಡಿ ನೌಕರರ ಸಂಘದ ಪ್ರತಿಭಟನೆ
Last Updated 10 ಜುಲೈ 2019, 10:40 IST
ಅಕ್ಷರ ಗಾತ್ರ

ಚಿತ್ರದುರ್ಗ: ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಅಂಗನವಾಡಿ ನೌಕರರಿಗೆ ನಿವೃತ್ತಿ ಸೌಲಭ್ಯ ಬದಲಾಯಿಸಿ ಪಿಂಚಣಿ ಸೌಲಭ್ಯ ನೀಡುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಎಲ್ಲಾ ರೀತಿಯ ಗುಣಾತ್ಮಕ ಮೂಲಸೌಲಭ್ಯ ಒದಗಿಸಬೇಕು. ಸೇವಾ ಜೇಷ್ಠತೆ ಆಧಾರದಲ್ಲಿ ಕನಿಷ್ಠ ವೇತನ ಜಾರಿ ಮಾಡಬೇಕು. ಮೇಲ್ವಿಚಾರಕಿಯಾಗಿ ಮುಂಬಡ್ತಿ ಹೊಂದುವ ಹುದ್ದೆಗಳನ್ನು ಸಂಪೂರ್ಣ ಅಂಗನವಾಡಿ ನೌಕರರಿಗೆ ಕೊಡಬೇಕು ಎಂದು ಆಗ್ರಹಿಸಿದರು.

ಅಂಗನವಾಡಿ ಸಹಾಯಕಿ ಕಾರ್ಯಕರ್ತೆಯಾಗಿ ಮುಂಬಡ್ತಿ ಪಡೆಯಲು ಇರುವ ವಯಸ್ಸಿನ ಮಿತಿಯನ್ನು ಸಡಿಲಿಸಬೇಕು. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆ ಭರ್ತಿ ಮಾಡಬೇಕು. ಅನೇಕ ಯೋಜನೆಗಳಿಗೆ ಡಿಡಿ, ಡಿಒ, ಸಿಡಿಪಿಒ, ಮೇಲ್ವಿಚಾರಕಿಯರನ್ನು ಕಾಯಂ ಆಗಿ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾ ನಿಯಮಾವಳಿ ರಚಿಸಬೇಕು. ಕೇಂದ್ರ ಸರ್ಕಾರ ಕಡಿತಗೊಳಿಸಿರುವ ಅನುದಾನ ವಾಪಾಸು ನೀಡಬೇಕು. ಅಂಗನವಾಡಿ ಕೇಂದ್ರದ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಸೂಚನೆಯನ್ನು ರಾಜ್ಯ ಸರ್ಕಾರ ಒಪ್ಪಬಾರದು ಎಂದು ಆಗ್ರಹಿಸಿದರು.

ಅಂಗನವಾಡಿ ನೌಕರರು ಇಲಾಖೆಯ ವಿವಿಧ ಕೆಲಸಗಳಿಗಾಗಿ ಹಲವೆಡೆ ಸಂಚರಿಸುವಾಗ ಅಪಘಾತವಾದರೆ ಪರಿಹಾರ ನೀಡಬೇಕು. 5 ವರ್ಷ ಪೂರೈಸಿದ ಮೇಲ್ವಿಚಾರಕಿಯರನ್ನು ಕಡ್ಡಾಯವಾಗಿ ವರ್ಗಾವಣೆ ಮಾಡಬೇಕು. ಪುರಸಭೆಯಿಂದ ನಗರಸಭೆ ಆಗಿರುವ ಅಂಗನವಾಡಿ ಕೇಂದ್ರಗಳಿಗೆ ಕೊಠಡಿ ಬಾಡಿಗೆಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು. ಕೇಂದ್ರ ಸರ್ಕಾರದಿಂದ 2018ರ ಅಕ್ಟೋಬರ್‌ನಲ್ಲಿ ಹೆಚ್ಚಳವಾದ ₹ 1,500 ಗೌರವಧನ ಕೂಡಲೇ ಬಿಡುಗಡೆ ಮಾಡಬೇಕು ಎಂದು ಕೋರಿದರು.

ಮುಖಂಡರಾದ ಇಂದಿರಮ್ಮ, ಗಂಗಮ್ಮ, ಸೌಭಾಗ್ಯಮ್ಮ, ಜಯಲಕ್ಷ್ಮಮ್ಮ, ಬೋರಮ್ಮ, ಸುಧಮ್ಮ, ರಾಜಪ್ಪ, ತಿಪ್ಪೇಸ್ವಾಮಿ, ಸಿ.ಕೆ.ಗೌಸ್‌ಪೀರ್, ಡಿ.ಎಂ. ಮಲಿಯಪ್ಪ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT