ಚಿತ್ರದುರ್ಗ: ತಾಲ್ಲೂಕಿನ ಬಳೆಕಟ್ಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ- 4ರಲ್ಲಿ ಮಂಗಳವಾರ ಶವ ಸಾಗಿಸುತ್ತಿದ್ದ ಆಂಬುಲೆನ್ಸ್, ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಸರೋಜಮ್ಮ (52) ಮೃತಪಟ್ಟಿದ್ದಾರೆ. ಹಾವೇರಿಯ ಶಿವಬಸವ (50) ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಖಾಸಗಿ ಆಂಬುಲೆನ್ಸ್‌ನಲ್ಲಿ ಮೃತದೇಹ ಸಾಗಿಸಲಾಗುತ್ತಿತ್ತು.
ನಿದ್ದೆ ಮಂಪರಿನಲ್ಲಿದ್ದ ಆಂಬುಲೆನ್ಸ್ ಚಾಲಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಗಾಯಾಳುಗಳ ಹೆಸರು ಪತ್ತೆಯಾಗಿಲ್ಲ, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ತಾಲ್ಲೂಕಿನ ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.