ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ | ಸಮುದಾಯ ಆರೋಗ್ಯ ಅಧಿಕಾರಿಗಳ ಸೇವೆ ಕಾಯಂಗೆ ಆಗ್ರಹ

ಸಮುದಾಯ ಆರೋಗ್ಯ ಅಧಿಕಾರಿಗಳ ಪ್ರತಿಭಟನೆ
Last Updated 19 ನವೆಂಬರ್ 2022, 6:32 IST
ಅಕ್ಷರ ಗಾತ್ರ

ಚಿತ್ರದುರ್ಗ: ಆರು ವರ್ಷ ಪೂರೈಸಿದ ಸಮುದಾಯ ಆರೋಗ್ಯ ಅಧಿಕಾರಿಗಳ ಸೇವೆಯನ್ನು ಕಾಯಂಗೊಳಿಸಬೇಕು ಎಂಬುದೂ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳ ನೌಕರರ ಸಂಘ ಶುಕ್ರವಾರ ಪ್ರತಿಭಟನೆ ನಡೆಸಿತು.

ಇಲ್ಲಿನ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಿಬ್ಬಂದಿ, ‘ಆಯುಷ್ಮಾನ್‌ ಭಾರತ್‌ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ 6 ವರ್ಷಗಳಿಂದ ಜಾರಿಯಲ್ಲಿದೆ. ರಾಜ್ಯದಲ್ಲಿ 6,182 ಸಮುದಾಯ ಆರೋಗ್ಯ ಅಧಿಕಾರಿಗಳು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಅನಗತ್ಯ ಕಿರುಕುಳ ನೀಡಲಾಗುತ್ತಿದೆ’ ಎಂದು ದೂರಿದರು.

ಬೇರೆ ರಾಜ್ಯಗಳಂತೆ ಇಲ್ಲೂ ₹ 15,000 ಪ್ರೋತ್ಸಾಹ ಧನ ನೀಡಬೇಕು. ಜತೆಗೆ ಜನ ಆರೋಗ್ಯ ಸಮಿತಿ ರಚಿಸಬೇಕು. ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸಬಲೀಕರಣ ಆಗಬೇಕು. ಅಂತರ್‌ ಜಿಲ್ಲೆ ವರ್ಗಾವಣೆ, ಪರಸ್ಪರ ವಿನಿಮಯಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎನ್‌. ರಂಗಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ಮಂಜುನಾಥ, ಜಿಲ್ಲಾ ಖಜಾಂಚಿ ಕೆ.ಬಿ. ಶ್ರೀನಿವಾಸ. ಆರ್‌. ಹಿಮಬಿಂದು, ಎಚ್‌. ನಾಗರಾಜ್‌, ಎಸ್‌. ಪ್ರಿಯಾ, ಭೀಮರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT