ಹೊಳಲ್ಕೆರೆ: ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಗಂಗಯ್ಯನ ಪಾಳ್ಯ ಗ್ರಾಮದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ರೈತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ರೈತ ಸಂಘದ ನೇತೃತ್ವದಲ್ಲಿ ರೈತರು ಶನಿವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
‘ಹಲ್ಲೆ ಅಮಾನವೀಯ ಕೃತ್ಯ. ಅರಣ್ಯ ಇಲಾಖೆಯ ಸಿಬ್ಬಂದಿ ಮಹಿಳೆಯರು, ಮಕ್ಕಳೆನ್ನದೆ ದೊಣ್ಣೆಗಳಿಂದ ಹೊಡೆದಿದ್ದಾರೆ. ಪ್ರಕರಣ ದಾಖಲಿಸಬೇಕು’ ಎಂದು ರೈತ ಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಆಗ್ರಹಿಸಿದರು.
ಬೆಂಗಳೂರಿನ ಯಲಹಂಕ ವ್ಯಾಪ್ತಿಯಲ್ಲಿ ಬಿಡಿಎ ಬಡಾವಣೆ ನಿರ್ಮಿಸಲು ರೈತರ ಜಮೀನನ್ನು ಬಲವಂತವಾಗಿ ಪಡೆಯುತ್ತಿದೆ. ಇದು ಖಂಡನೀಯ ಎಂದರು. ಮುಖಂಡರಾದ ದಿವ್ಯಜ್ಯೋತಿ, ವಿಜಯ, ಶಾಂತಮೂರ್ತಿ, ಎಸ್.ಎಂ. ಶಿವಕುಮಾರ್, ಜಯಪ್ಪ, ಸಿ.ನಾಗರಾಜು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.