ಚಿತ್ರದುರ್ಗ: ಸದ್ಯದ ಪರಿಸ್ಥಿತಿಯಲ್ಲಿ ಲಸಿಕೆ ಪಡೆಯುವುದೊಂದೇ ಕೊರೊನಾ ಸೋಂಕು ತಡೆಗಟ್ಟಲು ಇರುವ ದಾರಿ. ರಾಜ್ಯ ಸರ್ಕಾರ ವಿಳಂಬ ಮಾಡದೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಬೇಕು ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಡಿ.ಕುಮಾರ್ ಆಗ್ರಹಿಸಿದ್ದಾರೆ.

‘ಈವರೆಗೆ 45 ವರ್ಷ ಮೇಲ್ಪಟ್ಟ ಶೇ 25 ಜನರಿಗಷ್ಟೇ ಲಸಿಕೆ ನೀಡಲಾಗಿದೆ. ನಿತ್ಯ ಕೊರೊನಾ ಸೋಂಕು ಮಿತಿಮೀರಿ ಏರಿಕೆಯಾಗುತ್ತಿದೆ. ಸೋಂಕು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರದ ದುರಾಡಳಿತಕ್ಕೆ ಅಮಾಯಕರು ಬಲಿಯಾಗುತ್ತಿದ್ದಾರೆ. ಇನ್ನಾದರೂ ಬಿಜೆಪಿ ನಾಯಕರು ಕೆಲಸ ಮಾಡಬೇಕು. ಇಲ್ಲವೇ ಅಧಿಕಾರದಿಂದ ಕೆಳಗಿಳಿಯಬೇಕು’ ಎಂದು ಒತ್ತಾಯಿಸಿದ್ದಾರೆ.

‘ಕೋವಿಡ್ ಎರಡನೇ ಅಲೆಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಸರ್ಕಾರದ ಧೋರಣೆಯೇ ಕಾರಣ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದಾಗಿ ಹೇಳಿ ಈಗ ಸುಮ್ಮನಿದೆ. ಶೀಘ್ರವೇ ಸರ್ಕಾರ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.