ನಾಯಕನಹಟ್ಟಿ: ರಾಜ್ಯದಲ್ಲಿ ದಲಿತರಿಗೆ ಮೀಸಲಾಗಿದ್ದ ₹48 ಸಾವಿರ ಕೋಟಿ ಅನುದಾನವನ್ನು ಕಾಂಗ್ರೆಸ್ ಸರ್ಕಾರ 3 ವರ್ಷಗಳಿಂದ ಅನ್ಯ ಯೋಜನೆಗಳಿಗೆ ಬಳಸಿರುವುದು ಅಕ್ಷಮ್ಯ ಎಂದು ಸಂಸದ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಈಚೆಗೆ ಮುಕ್ತಾಯಗೊಂಡ ಫ್ಯೂಚರ್ ಚಾಂಪಿಯನ್ಸ್ ಜಿಲ್ಲಾಮಟ್ಟದ ಕಬಡ್ಡಿ ಟೂರ್ನಿಗೆ ಚಾಲನೆ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಅನುದಾನವನ್ನು ಚುನಾವಣಾ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಿಕೊಳ್ಳಲು ಬಳಸಿದ್ದು, ದಲಿತ ಸಮುದಾಯಗಳ ಬದುಕನ್ನು ಕಿತ್ತುಕೊಂಡಿದೆ ಎಂದರು.

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರಿಗೆ ನಿಜವಾದ ದಲಿತಪರ ಕಾಳಜಿ ಇದ್ದರೆ ತಕ್ಷಣವೇ ದಲಿತರಿಗೆ ಮೀಸಲಿಟ್ಟಿರುವ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ದಲಿತರ ಮಕ್ಕಳ ಶಿಕ್ಷಣ, ಉದ್ಯೋಗ, ಮನೆ ನಿರ್ಮಾಣ, ಭೂರಹಿತರಿಗೆ ಭೂಮಿ ಮತ್ತು ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಬಳಸಬೇಕು ಎಂದರು.

ಈ ಬಾರಿಯೂ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲ. ಕಾಂಗ್ರೆಸ್ ತಾನು ದಲಿತರ ಪರ, ಸಾಮಾಜಿಕ ನ್ಯಾಯದ ಪರ ಎಂದು ಹೇಳುತ್ತದೆ. ಆದರೆ ರಾಜ್ಯದಲ್ಲಿ ನಿಜವಾದ ದಲಿತ ವಿರೋಧಿ ಪಕ್ಷವೆಂದರೆ ಅದು ಕಾಂಗ್ರೆಸ್. ಹಿಂದೆ ಜಿ.ಪರಮೇಶ್ವರ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿಸಲು ಷಡ್ಯಂತ್ರ ನಡೆದದ್ದು ಇತಿಹಾಸ. ಮುಂದೆಂದೂ ಕಾಂಗ್ರೆಸ್ ದಲಿತರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಹೇಳಿದರು.

ಬಿಜೆಪಿ ಮಂಡಲ ಅಧ್ಯಕ್ಷ ಚನ್ನಗಾನಹಳ್ಳಿ ಮಲ್ಲೇಶ್, ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳಾದ ಮೋಹನ್ ಕುಮಾರ್, ಪಿ.ಎಂ.ಮಂಜುನಾಥ, ರಾಮ್ದಾಸ್, ಬಾಲರಾಜ್, ಮುಖಂಡರಾದ ಎಂ.ವೈ.ಟಿ.ಸ್ವಾಮಿ, ಟಿ.ಓಬಳೇಶ್, ನಿವೃತ್ತ ತಹಶೀಲ್ದಾರ್ ಎನ್.ರಘುಮೂರ್ತಿ, ಇ.ರಾಮರೆಡ್ಡಿ, ಗೋವಿಂದ, ಪಿ.ಶಿವಣ್ಣ, ತ್ರಿಶೂಲ್ಕುಮಾರ್, ಬಿ.ರಾಜು ಅವರೂ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-44-1109930372

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.