ಹಿರಿಯೂರು: ‘ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ರಾಜಕೀಯ ಮೀಸಲಾತಿ ಕಲ್ಪಿಸಿದ ಫಲವಾಗಿ ಗ್ರಾಮ ಪಂಚಾಯಿತಿಯಿಂದ ರಾಷ್ಟ್ರಪತಿಯವರೆಗೆ ಮಹಿಳೆಯರು ಅಧಿಕಾರಕ್ಕೆ ಬರಲು ಸಾಧ್ಯವಾಯಿತು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ತಾಲ್ಲೂಕು ಮಹಿಳಾ ಕಾಂಗ್ರೆಸ್ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

‘ಹೆಣ್ಣು ಎನ್ನುವುದೇ ಒಂದು ದಿವ್ಯ ಶಕ್ತಿ. ಕುಟುಂಬಕ್ಕೆ, ಸಮಾಜಕ್ಕೆ ಆಸರೆ. ಮಹಿಳೆಯರಿಗೆ ಮತದಾನದ ಹಕ್ಕನ್ನು ನೀಡಿದ ಡಾ.ಅಂಬೇಡ್ಕರ್ ಅವರಿಗೆ ಕೃತಜ್ಞತೆ ಸಲ್ಲಿಸಬೇಕು. ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮುಂದೆ ತೆಗೆದುಕೊಂಡು ಹೋಗಲು ಹಲವು ಜನಪರ ಯೋಜನೆ ಜಾರಿಗೆ ತಂದಿದ್ದ ಇಂದಿರಾ ಗಾಂಧಿಯಂತೆ ಸಾಧನೆಗೆ ಮುಂದಾಗಬೇಕು’ ಎಂದು ಸಲಹೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಸದಾ ಮಹಿಳೆಯರನ್ನು ಸಶಕ್ತಗೊಳಿಸುವತ್ತ ಚಿಂತನೆ ನಡೆಸುವುದು ಸಂತಸದ ಸಂಗತಿ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಗೀತಾ ನಾಗಕುಮಾರ್ ತಿಳಿಸಿದರು.

ಬಗರ್ಹುಕು ಸಮಿತಿ ಸದಸ್ಯೆ ಜೆ.ಆರ್.ಸುಜಾತಾ, ಯರಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮ್ಯ ನಾಗರಾಜ್, ನಗರಸಭೆ ಉಪಾಧ್ಯಕ್ಷೆ ಅಂಬಿಕಾ ಆರಾಧ್ಯ, ಮುಖಂಡರಾದ ಖಾದಿ ರಮೇಶ್, ಈರಲಿಂಗೇಗೌಡ, ಕವಿತಾ ಲೋಕೇಶ್, ಮಂಜುಳಮ್ಮ, ದೇವೀರಮ್ಮ, ಮಮತಾ, ತಿಪ್ಪಮ್ಮ ನಾಗರಾಜ್, ಸೇವಾದಳ ಇಂದ್ರಮ್ಮ, ಶರ್ಮಿಳಾ, ಸೆಲ್ವರಾಣಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.