ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳಲ್ಕೆರೆ: ಕಾಂಗ್ರೆಸ್ ಗೆಲುವಿಗೆ 101 ತೆಂಗಿನ ಕಾಯಿ ಒಡೆದ ಕಾರ್ಯಕರ್ತರು

Published 18 ಏಪ್ರಿಲ್ 2024, 14:53 IST
Last Updated 18 ಏಪ್ರಿಲ್ 2024, 14:53 IST
ಅಕ್ಷರ ಗಾತ್ರ

ಹೊಳಲ್ಕೆರೆ: ಪಟ್ಟಣದ ಪ್ರಸನ್ನ ಗಣಪತಿ ದೇವಸ್ಥಾನದ ಮುಂದೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಗೆಲುವಿಗೆ ಪ್ರಾರ್ಥಿಸಿ ಕೆಪಿಸಿಸಿ ರಾಜ್ಯಘಟಕದ ಪ್ರಧಾನ ಕಾರ್ಯದರ್ಶಿ ಪಿ.ರಘು 101 ತೆಂಗಿನ ಕಾಯಿಗಳನ್ನು ಒಡೆದರು.

ನಂತರ ಮಾತನಾಡಿದ ಪಿ.ರಘು, ‘ಕಾಂಗ್ರೆಸ್ ಪಕ್ಷ ಬಡವರು, ದೀನ, ತಲಿತರು, ಶೋಷಿತರ ಪರವಾದ ಪಕ್ಷವಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲಕ ಅವರನ್ನು ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸ್ವಾವಲಂಬಿಗಳಾಗುತ್ತಿದ್ದು, ಆರ್ಥಿಕವಾಗಿ ಪ್ರಬಲರಾಗುತ್ತಿದ್ದಾರೆ. ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಹಲವು ಗ್ಯಾರಂಟಿ ಯೋಜನೆಗಳು ಜಾರಿಯಾಗಲಿದ್ದು, ದೇಶದ ಜನ ನೆಮ್ಮದಿಯಿಂದ ಬದುಕುತ್ತಾರೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

‘ಬಿಜೆಪಿ ಸರ್ಕಾರ ಕೇವಲ ಶ್ರೀಮಂತರನ್ನು ಉದ್ಧಾರ ಮಾಡುವ ಪಕ್ಷ. ಅವರಿಗೆ ಬಡವರ ಹಸಿವಿನ ಬಗ್ಗೆ ಕಾಳಜಿ ಇಲ್ಲ. ಅವರು ಧರ್ಮ, ಜಾತಿ, ದೇವರ ಹೆಸರಿನಲ್ಲಿ ಮತ ಕೇಳುತ್ತಾರೆ. ಕಾಂಗ್ರೆಸ್ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ. ಆದ್ದರಿಂದ ಜನ ಕಾಂಗ್ರೆಸ್ ಬೆಂಬಲಿಸಬೇಕು’ ಎಂದು ಅವರು ಕೋರಿದರು.

ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿ ಬೈಕ್ ರ‍್ಯಾಲಿ ನಡೆಸಿದರು. ಮಾಜಿ ಶಾಸಕ ಎ.ವಿ.ಉಮಾಪತಿ, ಕೆಪಿಸಿಸಿ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಕೆ.ಎಂ.ಹಾಲೇಶ್, ರಾಜಪ್ಪ, ಪಾಂಡುರಂಗಸ್ವಾಮಿ, ಕಿರಣ್, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT