ಹಿರಿಯೂರು: ‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣ ಹಳಿ ತಪ್ಪಿದ್ದು, ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್ ಸಂಸ್ಕೃತಿ ಎಂತಹದ್ದು ಎಂಬುದು ಬಟಾಬಯಲಾಗಿದೆ’ ಎಂದು ಸಂಸದ ಗೋವಿಂದ ಕಾರಜೋಳ ಆರೋಪಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಪಕ್ಷದ ತಾಲ್ಲೂಕು ಮಂಡಲದ ವತಿಯಿಂದ ಆಯೋಜಿಸಿದ್ದ ಪಕ್ಷ ಸಂಘಟನೆ, ಮನ್ ಕಿ ಬಾತ್ ಹಾಗೂ ವಿಬಿ–ಜಿ ರಾಮ್ ಜಿ ಯೋಜನೆ ಕುರಿತ ಮಾಹಿತಿ ಹಂಚಿಕೆ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

‘ಕಾಂಗ್ರೆಸ್ ಜಾರಿಗೆ ತಂದಿದ್ದ ಮನರೇಗಾದಲ್ಲಿ ಕೇವಲ 100 ದಿನಗಳ ಅನಿಶ್ಚಿತ ಕೆಲಸ, ದಿನಕ್ಕೆ ಕೇವಲ ₹ 174 ಕೂಲಿ, ಪ್ರತಿ ವ್ಯಕ್ತಿಗೆ ವರ್ಷಕ್ಕೆ ₹ 17,400 ನೀಡಲಾಗುತ್ತಿತ್ತು. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿಬಿ–ಜಿ ರಾಮ್ ಜಿ ಯೋಜನೆಯಲ್ಲಿ 125 ದಿನಗಳ ಗ್ಯಾರಂಟಿ ಉದ್ಯೋಗ, ದಿನಕ್ಕೆ ₹ 375 ಕೂಲಿ ಹಾಗೂ ವರ್ಷಕ್ಕೆ ₹ 46,875 ಕೊಡಲಾಗುತ್ತದೆ’ ಎಂದು ಹೇಳಿದರು.

‘ಗಾಂಧೀಜಿ ಆರಾಧಿಸುತ್ತಿದ್ದ ರಾಮನ ಹೆಸರನ್ನು ಯೋಜನೆಗೆ ಇಡಲಾಗಿದೆ. ರಾಮನ ಹೆಸರು ಕಂಡರೆ ಆಗದ ಕಾಂಗ್ರೆಸ್ನವರು ವಿನಾಕಾರಣ ಯೋಜನೆಯ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದು, ನಮ್ಮ ಕಾರ್ಯಕರ್ತರು ಜನರಿಗೆ ಸರಿಯಾದ ಮಾಹಿತಿ ನೀಡುವ ಮೂಲಕ ಕಾಂಗ್ರೆಸ್ ಪಕ್ಷದ ಹುನ್ನಾರವನ್ನು ಬಯಲಿಗೆ ಎಳೆಯಬೇಕು’ ಎಂದು ಸಲಹೆ ನೀಡಿದರು.

ಮುಂಬರುವ ಜಿಲ್ಲಾ, ತಾಲ್ಲೂಕು ಪಂಚಾಯಿತಿ, ನಗರಸಭೆ ಒಳಗೊಂಡು ಎಲ್ಲ ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಬೂತ್ ಮಟ್ಟದಲ್ಲಿ ಪ್ರತಿಯೊಬ್ಬ ಕಾರ್ಯಕರ್ತರೂ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕು’ ಎಂದು ಮನವಿ ಮಾಡಿದರು.

‘ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷನಾಗಿ ಒಂದು ವರ್ಷ ಪೂರೈಸಿದ್ದೇನೆ. ನನಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ತಾಲ್ಲೂಕಿನಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ’ ಎಂದು ಅಧ್ಯಕ್ಷತೆ ವಹಿಸಿದ್ದ ಕೆ. ಅಭಿನಂದನ್ ಹೇಳಿದರು.

ಪಕ್ಷದ ಜಿಲ್ಲಾ ಘಟಕದ ನಿಕಟ ಪೂರ್ವ ಅಧ್ಯಕ್ಷ ಎ. ಮುರಳಿ ಮಾತನಾಡಿದರು. ಪಕ್ಷದ ಹಿರಿಯ ಮುಖಂಡ ಎನ್.ಆರ್. ಲಕ್ಷ್ಮೀಕಾಂತ್, ವಿ.ವಿಶ್ವನಾಥ್, ಎಂ.ನಿತಿನ್ ಗೌಡ, ದ್ಯಾಮೇಗೌಡ, ಸಿಂಧುತನಯ, ಅಸ್ಗರ್ ಅಹಮದ್, ರಾಜೇಶ್ವರಿ, ಸೋಮಣ್ಣ, ಕೇಶವಮೂರ್ತಿ, ನಾಗರಾಜ್, ಕೆ.ಟಿ. ಹನುಮಂತ, ಮುರುಳೀಧರ, ಯಶವಂತರಾಜು, ತಿಪ್ಪೀರಯ್ಯ, ಮಂಜುನಾಥ್, ಪ್ರಜ್ವಲ್, ಕೃಷ್ಣಮೂರ್ತಿ, ಉಮೇಶ್, ರಾಜಣ್ಣ, ವೇದಮೂರ್ತಿ, ಸರವಣ, ಸಿದ್ದಮ್ಮ, ದ್ರಾಕ್ಷಾಯಿಣಿ, ರತ್ನ, ತಹೀರಾಬಾನು, ಕವಿತಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.