ಚಿತ್ರದುರ್ಗ: ‘ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಬಡವರಿಗೆ ತಲುಪುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು. ಆ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಉತ್ತಮ ಹೆಸರು ತರಬೇಕು. ಇದರಿಂದ ಮತ್ತೆ 2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ’ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಜೊತೆಗೆ ಅಭಿವೃದ್ಧಿ ಕೆಲಸವನ್ನೂ ಸಮರ್ಥವಾಗಿ ನಡೆಸಲಾಗುತ್ತಿದೆ. ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಒದಗಿಸಲಾಗುತ್ತಿದೆ. ಹೀಗಾಗಿ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು.ಆ ಮೂಲಕ ಮತ್ತೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರ ಹಿಡಿಯಬೇಕು’ ಎಂದರು.

‘ಈಚೆಗೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಶಿಗ್ಗಾವಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಇತರೆ ಸಚಿವರ ಸಹಾಯ ಹಾಗೂ ಅಲ್ಲಿನ ಕಾರ್ಯಕರ್ತರ ಸಹಕಾರದಿಂದ ಗೆಲುವು ಸಾಧಿಸಲಾಗಿದೆ. ಅಲ್ಲಿ ಸತತವಾಗಿ ಬಿಜೆಪಿ ಗೆಲುವನ್ನು ಸಾಧಿಸುತ್ತಿತ್ತು. ಆದರೆ ಈ ಬಾರಿ ಅಲ್ಲಿನ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ನಮಗೆ ಆಶೀರ್ವಾದ ಮಾಡಿದ್ದಾರೆ’ ಎಂದರು.

‘ಸಚಿವರು ಯಾವುದೇ ಜಿಲ್ಲೆಗೆ ಭೇಟಿ ನೀಡಿದರೂ ಅಲ್ಲಿನ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವುದು ವಾಡಿಕೆಯಾಗಿದೆ. ಇದೇ ಮಾದರಿಯಲ್ಲಿ ನಾನೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ್ದೇನೆ. ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದ್ದಾರೆ. ಪಕ್ಷದ ಅಧ್ಯಕ್ಷರ, ಮುಖಂಡರ, ಕಾರ್ಯಕರ್ತರ ಸಮಸ್ಯೆಯನ್ನು ಆಲಿಸಿ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕು ಎನ್ನುವುದು ನನ್ನ ಆಸೆ. ಸಮಸ್ಯೆ ಹೇಳಿದರೆ ಪಕ್ಷದ ವರಿಷ್ಠರ ಬಳಿ ಹೇಳಿ ಅದರ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇನೆ’ ಎಂದರು.

ಶಾಸಕ ಟಿ.ರಘುಮೂರ್ತಿ ಮಾತನಾಡಿ ‘ಸತೀಶ್ ಜಾರಕಿಹೊಳಿ ಅವರು ಯಾವುದೇ ಪ್ರಚಾರ ಬಯಸದೇ ತಮ್ಮ ಪಾಲಿನ ಕೆಲಸವನ್ನು ಸಮರ್ಥವಾಗಿ ಮಾಡುತ್ತಿದ್ದಾರೆ. ಇದರಿಂದ ಪಕ್ಷ ಪ್ರಗತಿ ಹೊಂದಲು ಸಾಧ್ಯವಿದೆ. ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆಲುವಿಗೆ ಅವಕಾಶ ಇರಲಿಲ್ಲ. ಆದರೆ ಸತೀಶ್ ಅವರು ಅಲ್ಲಿಯ ಉಸ್ತುವಾರಿ ಪಡೆದು ಅಲ್ಲಿ ಪಕ್ಷ ಗೆಲುವಿಗೆ ಸಹಕಾರಿಯಾದರು’ ಎಂದರು.

ಶಾಸಕ ಕೆ.ಸಿ.ವಿರೇಂದ್ರ ಮಾತನಾಡಿ ‘ಈಚೆಗೆ ಚಿತ್ರದುರ್ಗ, ನಾಯಕನಹಟ್ಟಿಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇದಕ್ಕೆ ಪಕ್ಷದ ಕಾರ್ಯಕರ್ತರು ಕಾರಣರಾಗಿದ್ದಾರೆ. ಇದೇ ರೀತಿ ಮುಂದಿನ ತಾ.ಪಂ, ಜಿ.ಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವನ್ನು ಸಾಧಿಸಬೇಕಿದೆ’ ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತಾಜ್ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷರಾದ ಗೀತಾನಂದಿನಿಗೌಡ, ಶಶಿಕಲಾ ಸುರೇಶ್ ಬಾಬು, ನರಸಿಂಹರಾಜು, ಸರ್ದಾರ್, ಪ್ರಸನ್ನಕುಮಾರ್, ಎನ್.ಡಿ.ಕುಮಾರ್, ಅಂಜನಪ್ಪ, ಕುಮಾರ್ ಗೌಡ, ಸಂಪತ್ ಕುಮಾರ್, ಶಿವಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.