ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡಿ. ಸುಧಾಕರ್‌ಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಶಕ್ತಿ ಪ್ರದರ್ಶನ

Published 24 ಮೇ 2023, 16:25 IST
Last Updated 24 ಮೇ 2023, 16:25 IST
ಅಕ್ಷರ ಗಾತ್ರ

ಹಿರಿಯೂರು: ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜೈನ ಸಮುದಾಯದ ಏಕೈಕ ಪ್ರತಿನಿಧಿ ಡಿ. ಸುಧಾಕರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮನೆಗಳ ಎದುರು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

‘ಸುಧಾಕರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ನಾವು ಪ್ರತಿಭಟನೆ ನಡೆಸುತ್ತಿಲ್ಲ. ಬದಲಿಗೆ ಪಕ್ಷದ ವರಿಷ್ಠರಿಗೆ ಸಚಿವ ಸ್ಥಾನ ನೀಡಬೇಕಿರುವ ಅನಿವಾರ್ಯತೆ ಬಗ್ಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದ್ದೇವೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಮ್ಮ ಮನವಿಗೆ ಸ್ಪಂದಿಸಬೇಕು. 2018ರ ಚುನಾವಣೆಯಲ್ಲಿ ಜಿಲ್ಲೆಯಿಂದ ಕೇವಲ ಒಬ್ಬರೇ ಶಾಸಕರು ಆಯ್ಕೆಯಾಗಿದ್ದರು. ಈ ಬಾರಿ ಐದು ಜನ ಆಯ್ಕೆಯಾಗಿದ್ದಾರೆ. ಒಮ್ಮೆ ಸಮಾಜ ಕಲ್ಯಾಣ ಸಚಿವರಾಗಿ ಅನುಭವ ಹೊಂದಿರುವ ಸುಧಾಕರ್ ಸಚಿವ ಸ್ಥಾನಕ್ಕೆ ಅರ್ಹರಿದ್ದು, ಪಕ್ಷ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಒತ್ತಾಯಿಸಿದರು.

‘‌ಸುಧಾಕರ್ ಅವರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ. ಶೀಘ್ರದಲ್ಲಿಯೇ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯಲು ಸುಧಾಕರ್ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಲಿಂಗೇಗೌಡ ಒತ್ತಾಯಿಸಿದರು.

ಅಮೃತೇಶ್ವರಸ್ವಾಮಿ, ಗೀತಾನಂದಿನಿಗೌಡ, ಆರ್. ನಾಗೇಂದ್ರನಾಯ್ಕ್, ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ಟಿ. ಚಂದ್ರಶೇಖರ್, ಮಹಲಿಂಗಪ್ಪ, ಶಶಿಕಲಾ ಸುರೇಶ್ ಬಾಬು, ಕಂದಿಕೆರೆ ಸುರೇಶ್ ಬಾಬು, ಎಸ್.ಆರ್. ತಿಪ್ಪೇಸ್ವಾಮಿ, ಡಿ. ಶಿವಣ್ಣ, ಗಿಡ್ಡೋಬನಹಳ್ಳಿ ಅಶೋಕ್, ಚಂದ್ರಪ್ಪ, ಶಿವು, ಪಿಟ್ಲಾಲಿ ರವಿ, ಜ್ಞಾನೇಶ್, ವಿ. ಶಿವಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT