ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಏ.24ರಂದು ಯೋಗಿ ಆದಿತ್ಯನಾಥ್‌ ರೋಡ್‌ ಶೋ ಬದಲು ಸಮಾವೇಶ

Published 20 ಏಪ್ರಿಲ್ 2024, 15:57 IST
Last Updated 20 ಏಪ್ರಿಲ್ 2024, 15:57 IST
ಅಕ್ಷರ ಗಾತ್ರ

ಚಿತ್ರದುರ್ಗ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಮತಯಾಚನೆಗೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಏ.24ರಂದು ಚಿತ್ರದುರ್ಗದಲ್ಲಿ ನಡೆಸಬೇಕಿದ್ದ ರೋಡ್‌ ಶೋ ರದ್ದಾಗಿದೆ. ಆದರೆ, ಇದೇ ದಿನ ಸಮಾವೇಶ ನಡೆಸಲಾಗುತ್ತದೆ ವಿಧಾನಪರಿಷತ್ ಸದಸ್ಯ ಕೆ.ಎಸ್‌.ನವೀನ್‌ ತಿಳಿಸಿದರು.

‘ಪೂರ್ವ ನಿಗದಿಯಂತೆ ಬೆಳಿಗ್ಗೆ ರೋಡ್‌ ಶೋ ನಡೆಯಬೇಕಿತ್ತು. ಕಾರಣಾಂತರದಿಂದ ಅಂದು ಬೆಳಿಗ್ಗೆ 11ಕ್ಕೆ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಯುವ ಸಮಾವೇಶದಲ್ಲಿ ಯೋಗಿ ಆದಿತ್ಯನಾಥ್‌ ಭಾಗವಹಿಸಲಿದ್ದಾರೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಕಾಂಗ್ರೆಸ್‌ನ ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಅಂಚಿಗೆ ತಲುಪಲಿದೆ. ಪ್ರಣಾಳಿಕೆಯಲ್ಲಿ ಅಭಿವೃದ್ಧಿಯ ಪ್ರಸ್ತಾಪವಿಲ್ಲ. ಮಹಿಳೆಯರಿಗೆ ವರ್ಷಕ್ಕೆ ₹ 1 ಲಕ್ಷ ನೀಡುವುದಾಗಿ ಹೇಳಿದೆ. ಅದರ ಪ್ರಕಾರ ವರ್ಷಕ್ಕೆ ₹ 25 ಲಕ್ಷ ಕೋಟಿ ಬೇಕು. ಕೇಂದ್ರದ ಬಜೆಟ್ ಗಾತ್ರವೇ ₹ 47 ಲಕ್ಷ ಕೋಟಿ. ಈ ಸರಳ ಸತ್ಯವನ್ನು ಜನರು ಅರ್ಥ ಮಾಡಿಕೊಳ್ಳಬೇಕು’ ಎಂದರು.

ಜಿಲ್ಲಾಮಟ್ಟದಲ್ಲಿ ಸಂಕಲ್ಪ ಪತ್ರ ಬಿಡುಗಡೆ ಮಾಡಲಾಯಿತು. ನಗರಸಭೆ ಸದಸ್ಯರಾದ ಸುರೇಶ್‌, ಹರೀಶ್, ಬಿಜೆಪಿ ಉಪಾಧ್ಯಕ್ಷ ಶಿವಣ್ಣಾಚಾರ್, ರವಿಕುಮಾರ್, ಪರಮೇಶ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ವೀರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT