ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: 74 ಜನರಿಗೆ ಕೋವಿಡ್ ದೃಢ

Last Updated 19 ಅಕ್ಟೋಬರ್ 2020, 13:52 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯಲ್ಲಿ ಸೋಮವಾರ 74 ಜನರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,603 ಕ್ಕೆ ಏರಿಕೆಯಾಗಿದೆ.

ಸೋಮವಾರ 742 ಜನರ ಗಂಟಲು ಹಾಗೂ ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. ಪರೀಕ್ಷೆಗೆ ಒಳಪಡಿಸಿದ ಮಾದರಿಗಳ ಪೈಕಿ 74 ಜನರಿಗೆ ಕೋವಿಡ್‌ ಖಚಿತವಾಗಿದೆ. ಜಿಲ್ಲಾ ಕೋವಿಡ್‌ ಆಸ್ಪತ್ರೆ ಸೇರಿ ಜಿಲ್ಲೆಯ ಹಲವೆಡೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 58 ಜನರು ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರಲ್ಲಿ ಈವರೆಗೆ 10,175 ಜನರು ಗುಣಮುಖರಾಗಿದ್ದಾರೆ.

ಈವರೆಗೆ ಜಿಲ್ಲೆಯಲ್ಲಿ 52 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸದ್ಯ 376 ಸಕ್ರಿಯ ಪ್ರಕರಣಗಳಿವೆ. ಇನ್ನೂ 401 ಜನರ ವರದಿ ಬರುವುದು ಬಾಕಿ ಇದೆ. ಈವರೆಗೆ 89,630 ಜನರ ಮಾದರಿ ಸಂಗ್ರಹಿಸಲಾಗಿದ್ದು, 78,138 ಜನರ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT