ಚಿತ್ರದುರ್ಗ: ‘ಉದ್ಯೋಗ ಖಾತ್ರಿ ಯೋಜನೆಯಲ್ಲಿ ಆಗುತ್ತಿದ್ದ ಭ್ರಷ್ಟಾಚಾರ ತಡೆದು ಗ್ರಾಮೀಣ ಭಾಗದ ಬಡವರ ಬದುಕು ಸುಧಾರಣೆಗಾಗಿ ವಿಬಿ ಜಿ ರಾಮ್ ಜಿ (ವಿಕಸಿತ ಭಾರತ–ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಗ್ರಾಮೀಣ ಯೋಜನೆ) ಜಾರಿಗೊಳಿಸಲಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದರು.

‘2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ಉದ್ದೇಶದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯೋಜನೆ ರೂಪಿಸಿದ್ದಾರೆ. ಇಷ್ಟು ವರ್ಷಗಳ ಕಾಲ ಉದ್ಯೋಗ ಖಾತ್ರಿ ಯೋಜನೆಯಿಂದ ಗ್ರಾಮೀಣ ಭಾಗದಲ್ಲಿ ಯಾವುದೇ ಆಸ್ತಿ ಸೃಷ್ಟಿ ಮಾಡಲು ಸಾಧ್ಯವಾಗಿಲ್ಲ. ಉದ್ಯೋಗ ಚೀಟಿಗಳ ಹೆಸರಿನಲ್ಲಿ ನಡೆಯುತ್ತಿದ್ದ ವ್ಯಾಪಕ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡುವ ಉದ್ದೇಶದಿಂದ ಯೋಜನೆಗೆ ಹೊಸ ರೂಪ ನೀಡಲಾಗಿದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಮಹಾತ್ಮ ಗಾಂಧಿ ಅವರ ಹೆಸರು ತೆಗೆಯುವಂತಹ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿಲ್ಲ. ಮಹಾತ್ಮಾ ಗಾಂಧಿ ರಾಷ್ಟ್ರಪಿತರಾಗಿದ್ದು ಅವರ ಹೆಸರು ಎಲ್ಲರ ಮನೆ, ಮನಗಳಲ್ಲಿದೆ. ಗ್ರಾಮೀಣ ಭಾರತದ ಸುಧಾರಣೆಗಾಗಿ ಜಿ ರಾಮ್ ಜಿ ಯೋಜನೆ ರೂಪಿಸಲಾಗಿದೆ. ಇದರ ವಿರುದ್ಧ ಕಾಂಗ್ರೆಸ್ ಅಪಪ್ರಚಾರ ನಡೆಸುತ್ತಿದೆ. ನಾವು ರಾಜ್ಯದಾದ್ಯಂತ ಕಾಯ್ದೆಯಲ್ಲಿ ಇರುವ ಉತ್ತಮ ಅಂಶಗಳ ಬಗ್ಗೆ ಜನಜಾಗೃತಿ ಮೂಡಿಸುತ್ತೇವೆ’ ಎಂದರು.

‘ಉದ್ಯೋಗ ಖಾತ್ರಿ ಯೋಜನೆಯಡಿ ಚಿತ್ರದುರ್ಗದ ಜಿಲ್ಲೆಗೆ ಕಳೆದ 3 ವರ್ಷಗಳಲ್ಲಿ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ನಾನು ವಿಧಾನ ಪರಿಷತ್ನಲ್ಲಿ ಮಾಹಿತಿ ಕೇಳಿದ್ದೆ. ಆದರೆ ಸಮರ್ಪಕ ಉತ್ತರ ದೊರೆಯಲಿಲ್ಲ. ಈ ವರ್ಷವೂ ಸೇರಿದಂತೆ ಜಿಲ್ಲೆಗೆ ₹ 1,200 ಕೋಟಿ ಮೊತ್ತ ಉದ್ಯೋಗ ಖಾತ್ರಿ ಯೋಜನೆಯಡಿ ಬಂದಿದೆ. ಆದರೆ, ಹಳ್ಳಿಗಳಲ್ಲಿ ಯಾವುದೇ ಆಸ್ತಿಗಳು ಸೃಷ್ಟಿಯಾಗಿಲ್ಲ’ ಎಂದರು.

‘ಕಾಂಗ್ರೆಸ್ ಅವಧಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಗೆ ₹ 2 ಲಕ್ಷ ಕೋಟಿ ಅನುದಾನ ಒದಗಿಸಲಾಗಿತ್ತು. ಆದರೆ, 2014ರಿಂದ ನರೇಂದ್ರ ಮೋದಿ ಅವರು ₹ 8.5 ಲಕ್ಷ ಕೋಟಿ ಮಪತ್ತ ನೀಡಿದ್ದರು. ಆದರೂ ಗ್ರಾಮೀಣ ಭಾಗದಲ್ಲಿ ಹೇಳಿಕೊಳ್ಳುವಂತಹ ಸಾಧನೆ ಆಗಲಿಲ್ಲ. ಯೋಜನೆ ದೊಡ್ಡ ಮಟ್ಟದ ಭ್ರಷ್ಟಾಚಾರಕ್ಕೆ ಕಾರಣವಾಗಿತ್ತು. ಉದ್ಯೋಗ ಚೀಟಿಗಳ ದುರುಪಯೋಗ ಮಾಡಿಕೊಂಡು ಕೆಲವೇ ಕೆಲವು ಮಂದಿ ಹಣ ಲೂಟಿ ಮಾಡುತ್ತಿದ್ದರು’ ಎಂದು ಆರೋಪಿಸಿದರು.

‘ಜಿ ರಾಮ್ ಜಿ ಯೋಜನೆಯಲ್ಲಿ ಲೂಟಿಗೆ ಅವಕಾಶವಿಲ್ಲ. ಎಲ್ಲವನ್ನು ಸ್ಯಾಟಲೈಟ್ ಮೂಲಕ ಡಿಜಿಟಲ್ ಮ್ಯಾಪಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತದೆ. ಭ್ರಷ್ಟಾಚಾರದ ಹಾದಿಯನ್ನು ಬಂದ್ ಮಾಡುವ ಉದ್ದೇಶದಿಂದಲೇ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ’ ಎಂದರು.

‘ಉದ್ಯೋಗ ಖಾತ್ರಿ ಯೋಜನೆಯಲ್ಲಿ 100 ದಿನಗಳ ಉದ್ಯೋಗ ನೀಡಲಾಗುತ್ತಿತ್ತು. ಹೊಸ ಕಾಯ್ದೆಯ ಮೂಲಕ 125 ದಿನಗಳ ಉದ್ಯೋಗ ನೀಡಲಾಗುವುದು. ಜೊತೆಗೆ ಹಳ್ಳಿ ರೈತರು ಮುಂಗಾರು ಮಳೆ ಅವಧಿಯಲ್ಲಿ ಕೃಷಿ ಕೆಲಸಗಳನ್ನು ಮುಗಿಸಿಕೊಂಡ ನಂತರ ಬಿಡುವಿನ ಅವಧಿಯಲ್ಲಿ ಯೋಜನೆಯಡಿ ಉದ್ಯೋಗ ಪಡೆಯುವಂತಹ ಉತ್ತಮ ಸುಧಾರಣೆಯನ್ನೂ ಮಾಡಲಾಗಿದೆ’ ಎಂದರು.

‘ಹಳೆಯ ಕಾಯ್ದೆಯಲ್ಲಿ ಗ್ರಾಮಸಭೆಗಳಿಗೆ ಅರ್ಥವೇ ಇರಲಿಲ್ಲ. ಉನ್ನತ ಮಟ್ಟದ ಅಧಿಕಾರಿಗಳು, ಗುತ್ತಿಗೆದಾರರು ಏಕ ಪಕ್ಷೀಯವಾಗಿ ಹಣ ಪಡೆಯುತ್ತಿದ್ದರು. ಹೊಸ ಕಾಯ್ದೆಯಲ್ಲಿ ಇಂತಹ ಚಟುವಟಿಕೆಗೆ ಅವಕಾಶವಿಲ್ಲ. ಇಡೀ ಯೋಜನೆಯ ನಿರ್ವಹಣೆ, ಕಾಮಗಾರಿ ಆಯ್ಕೆ, ಅನುಷ್ಠಾನ ಜನಬ್ದಾರಿಯನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಲಾಗಿದೆ’ ಎಂದರು.

‘ಕೇಂದ್ರ ಸರ್ಕಾರ ನೀಡುತ್ತಿರುವ ಉದ್ಯೋಗ ಗ್ಯಾರಂಟಿಯೇ ನಿಜವಾದ ಗ್ಯಾರಂಟಿಯಾಗಿದೆ. ಉಚಿತವಾಗಿ ಯಾವುದನ್ನೂ ನೀಡುತ್ತಿಲ್ಲ. ಅವರಿಂದ ಆಸ್ತಿ ನಿರ್ಮಾಣವಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಲ ಮಾಡಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದಾರೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ಜಿ ರಾಮ್ ಜಿ ಯೋಜನೆ ಮೂಲಕ ಗ್ರಾಮೀಣ ಜನರಿಗೆ ಉದ್ಯೋಗ ನೀಡುವ ಜೊತೆಗೆ ಆಸ್ತಿ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಮಲ್ಲಿಕಾರ್ಜುನ್, ವೆಂಕಟೇಶ್ ಯಾದವ್, ನಾಗರಾಜ ಬೇದ್ರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.