ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬಕಾರಿ ಇಲಾಖೆಯ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ: ಸಚಿವ ಆರ್‌.ಬಿ. ತಿಮ್ಮಾಪುರ

Published 16 ಅಕ್ಟೋಬರ್ 2023, 15:33 IST
Last Updated 16 ಅಕ್ಟೋಬರ್ 2023, 15:33 IST
ಅಕ್ಷರ ಗಾತ್ರ

ಚಿತ್ರದುರ್ಗ: ಅಬಕಾರಿ ಇಲಾಖೆಯಲ್ಲಿರುವ ಭ್ರಷ್ಟಾಚಾರನ್ನು ಕಡಿವಾಣ ಹಾಕುವ ಪ್ರಕ್ರಿಯೆ ಭಾಗವಾಗಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲ್ಲೆಲ್ಲಿ ಸಾಧ್ಯವೋ ಅಲ್ಲಿ ಭ್ರಷ್ಟಾಚಾರವನ್ನು ನಿಯಂತ್ರಿಸಲಾಗುವುದು ಎಂದ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ತಿಳಿಸಿದರು.

‘ಇಲಾಖೆಯ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಭ್ರಷ್ಟಾಚಾರ ಹಲವು ವರ್ಷಗಳ ಕೊಡುಗೆ. ಡಿಸ್ಟಿಲರಿ ಹಾಗೂ ಮದ್ಯದಂಗಡಿ ಪರವಾನಗಿ ನವೀಕರಣವನ್ನು ಎರಡು ವರ್ಷಕ್ಕೊಮ್ಮೆ ಮಾಡುವ ಆಲೋಚನೆ ಇದೆ. ಶೀಘ್ರವೇ ಅಧಿಕಾರಿಗಳ ಸಭೆ ಕರೆದು ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ದೆಹಲಿಯಲ್ಲಿರುವ ಪಕ್ಷದ ವರಿಷ್ಠರನ್ನು ವಲಿಸಿಕೊಳ್ಳುವ ಉಮೇದಿನಲ್ಲಿ ಕೆಲ ಬಿಜೆಪಿ ನಾಯಕರು ಕಾಂಗ್ರೆಸ್‌ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ವಿಧಾಸಭೆಯ ವಿರೋಧ ಪಕ್ಷದ ನಾಯಕರಾಗಲು ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗುವ ಗುಂಗಿನಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇಂತಹ ರಾಜಕೀಯ ಪ್ರೇರಿತ ಹೇಳಿಕೆಗಳಿಗೆ ಹೆಚ್ಚು ಬೆಲೆ ಕೊಡುವುದಿಲ್ಲ’ ಎಂದರು.

ಕಾಂಗ್ರೆಸ್‌ ಮುಖಂಡರಾದ ಬಿ.ಟಿ.ಜಗದೀಶ್‌, ಕೃಷ್ಣಮೂರ್ತಿ, ರಘು, ಸಾದತ್‌, ಅಬ್ಬಾಸ್‌ ಇದ್ದರು.

ಲೋಕಸಭಾ ಚುನಾವಣೆಗೆ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಲು ಪುತ್ರ ವಿನಯ್‌ ಇಂಗಿತ ವ್ಯಕ್ತಪಡಿಸಿದ್ದಾರೆ. ಪಕ್ಷ ಅವಕಾಶ ಕಲ್ಪಿಸಿದರೆ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಮುಂದುವರಿಯಲಿದ್ದಾರೆ.
ಆರ್‌.ಬಿ.ತಿಮ್ಮಾಪುರ, ಅಬಕಾರಿ ಸಚಿವ
ಟಿಕೆಟ್‌ ಆಕಾಂಕ್ಷಿ: ವಿನಯ್‌
ಲೋಕಸಭಾ ಚುನಾವಣೆಗೆ ಚಿತ್ರದುರ್ಗ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್ ನಿರೀಕ್ಷಿಸಿದ್ದೇನೆ. ಶಾಸಕರು, ಹಿರಿಯ ನಾಯಕರು ಅವಕಾಶ ಕಲ್ಪಿಸಿದರೆ ಸ್ಪರ್ಧೆ ಮಾಡಲಿದ್ದೇನೆ ಎಂದು ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನಯ್‌ ತಿಮ್ಮಾಪುರ ತಿಳಿಸಿದರು. ‘ಯುವ ಕಾಂಗ್ರೆಸ್‌ನಲ್ಲಿ ಏಳು ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಪಕ್ಷದ ದುಡಿದಿರುವುದರ ಆಧಾರದ ಮೇರೆಗೆ ಟಿಕೆಟ್ ಕೇಳುತ್ತಿದ್ದೇನೆ. ಟಿಕೆಟ್‌ ಕೈತಪ್ಪಿದರೆ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT