ದಂಪತಿಯನ್ನು ಅವರ ಅಳಿಯ ಮಂಜುನಾಥ್ ಹಾಗೂ ಆತನ ಕುಟುಂಬ ಸದಸ್ಯರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತರ ಮಗಳು ಹರ್ಷಿತಾ ದೂರು ನೀಡಿದ್ದರು. ಇದರ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಮಂಜುನಾಥ್ ಹಾಗೂ ಇತರರ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದರು. ತುರುವನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.