ಮಂಗಳವಾರ, ಆಗಸ್ಟ್ 20, 2019
25 °C

ಮದುವೆಯಾಗುವುದಾಗಿ ಪುಸಲಾಯಿಸಿ ಮಹಿಳೆ ಅಪಹರಣ: 5 ವರ್ಷ ಶಿಕ್ಷೆ

Published:
Updated:

ಚಿತ್ರದುರ್ಗ: ಮದುವೆಯಾಗುವುದಾಗಿ ಪುಸಲಾಯಿಸಿ ಮಹಿಳೆಯೊಬ್ಬರನ್ನು ಅಪಹರಿಸಿದ ಆರೋಪ ಸಾಬೀತಾಗಿದ್ದು, ನಾಗರಾಜ ಎಂಬಾತನಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಸೋಮವಾರ ಆದೇಶ ಪ್ರಕಟಿಸಿದೆ.

ಅಹಪರಣಕ್ಕೆ ಕುಮ್ಮಕ್ಕು ನೀಡಿದ ಜಯಣ್ಣ ಎಂಬಾತನಿಗೆ ಎರಡು ವರ್ಷ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬನ್ನಿಕಟ್ಟಿ ಎಚ್‌.ಆರ್‌ ಅವರು ಈ ಆದೇಶ ನೀಡಿದ್ದಾರೆ.

ಚಳ್ಳಕೆರೆ ತಾಲ್ಲೂಕಿನ ರಂಗವ್ವನಹಳ್ಳಿಯ ನಾಗರಾಜ 2012ರ ಜುಲೈ 21ರಂದು ಮಹಿಳೆಯೊಬ್ಬರನ್ನು ಅಪಹರಿಸಿದ್ದನು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್‌ ಎಂ.ಚಂದ್ರಪ್ಪ ಸರ್ಕಾರದ ಪರ ವಾದ ಮಂಡಿಸಿದ್ದರು.

Post Comments (+)