ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 250 ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಗುಣಮುಖರಾದವರ ಸಂಖ್ಯೆ 4,061ಏರಿಕೆಯಾಗಿದೆ.
ಇದೇ ದಿನ ಜಿಲ್ಲೆಯಲ್ಲಿ 125 ಜನರಲ್ಲಿ ಕೋವಿಡ್ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 5,356ಕ್ಕೆ ಏರಿಕೆಯಾಗಿದೆ.
ಮಂಗಳವಾರ1,262 ಜನರ ಗಂಟಲು, ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಪರೀಕ್ಷೆಯ ವರದಿಯಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ 62, ಚಳ್ಳಕೆರೆ 13, ಹಿರಿಯೂರು 5, ಹೊಸದುರ್ಗ 13, ಮೊಳಕಾಲ್ಮುರು 13 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 19 ಕೋವಿಡ್ ಪ್ರಕರಣ ದೃಢಪಟ್ಟಿವೆ.
ಜಿಲ್ಲೆಯಲ್ಲಿ ಸದ್ಯ 1,260 ಸಕ್ರಿಯ ಪ್ರಕರಣಗಳು ಇವೆ. ಈವರೆಗೆ 34 ಜನರು ಕೋವಿಡ್ನಿಂದ ಮೃತಪಟ್ಟಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಒಟ್ಟು 1,196 ಕಂಟೈನ್ಮೆಂಟ್ ವಲಯಗಳಿವೆ. ಇನ್ನೂ 777 ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ತಿಳಿಸಿದೆ.