ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ 89 ಜನರಿಗೆ ಕೋವಿಡ್‌, 62 ಸೋಂಕಿತರು ಗುಣಮುಖ

Last Updated 20 ಅಕ್ಟೋಬರ್ 2020, 12:25 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 62 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಗುಣಮುಖರಾದವರ ಸಂಖ್ಯೆ 10,237ಕ್ಕೆ ಹೆಚ್ಚಿದೆ. ಜಿಲ್ಲೆಯಲ್ಲಿ ಸದ್ಯ 403 ಸಕ್ರಿಯ ಪ್ರಕರಣಗಳಿವೆ.

ಮಂಗಳವಾರ 1,985 ಜನರ ಗಂಟಲು ಮತ್ತು ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. ಪರೀಕ್ಷೆಗೆ ಒಳಗಾದ ಮಾದರಿಗಳ ಪೈಕಿ 89 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇನ್ನೂ 1,001 ಜನರ ವರದಿ ಬರುವುದು ಬಾಕಿ ಇದೆ. ಈವರೆಗೆ 52 ಜನ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. 86,577 ಜನರನ್ನು ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರೆಂದು ಗುರುತಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT