ಭಾನುವಾರ, ಮೇ 16, 2021
22 °C
45 ಜನರಿಗೆ ಕೋವಿಡ್‌ ದೃಢ, 23 ಮಂದಿ ಗುಣಮುಖ

ಚಿತ್ರದುರ್ಗ, ಹಿರಿಯೂರಲ್ಲಿ ಸೋಂಕು ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಧಾನಗತಿಯಲ್ಲಿ ಏರಿಕೆ ಕಾಣುತ್ತಿದೆ. ಚಿತ್ರದುರ್ಗ ಹಾಗೂ ಹಿರಿಯೂರು ತಾಲ್ಲೂಕಿನಲ್ಲಿ ಮಾತ್ರ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ.

ಜಿಲ್ಲೆಯಲ್ಲಿ ಭಾನುವಾರ 45 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಚಿತ್ರದುರ್ಗ 18 ಹಾಗೂ ಹಿರಿಯೂರಿನ 15 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಹೊಸದುರ್ಗ 5, ಚಳ್ಳಕೆರೆ 4, ಹೊಳಲ್ಕೆರೆ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ ತಲಾ ಒಬ್ಬರಲ್ಲಿ ಕೋವಿಡ್‌ ಕಾಣಿಸಿಕೊಂಡಿದೆ.

ಕೋವಿಡ್‌ ಪರೀಕ್ಷೆಯ ಪ್ರಮಾಣವೂ ಏರಿಕೆ ಆಗುತ್ತಿದೆ. ಭಾನುವಾರ 1,948 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ ಇನ್ನೂ 748 ಜನರ ವರದಿ ಬರುವುದು ಬಾಕಿ ಇದೆ. ಕೊರೊನಾ ಸೋಂಕಿತರ ಸಂಖ್ಯೆ 15,485ಕ್ಕೆ ಏರಿಕೆಯಾಗಿದೆ.

ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 23 ಜನರು ಭಾನುವಾರ ಚೇತರಿಸಿಕೊಂಡಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 15,243 ಜನರು ಗುಣಮುಖರಾಗಿದ್ದಾರೆ. 70 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಿಸಿ ರಂಗನಾಥ್‌ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.