ಚಿತ್ರದುರ್ಗ: ಜಿಲ್ಲೆಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಕೋವಿಡ್–19 ರೋಗಿಗಳ ಸಂಖ್ಯೆ ಜಿಲ್ಲೆಯಲ್ಲಿ 92 ಕ್ಕೆ ಏರಿಕೆಯಾಗಿದೆ.

ಚಳ್ಳಕೆರೆಯ 26 ವರ್ಷದ ಪುರುಷ ಹಾಗೂ ಹಿರಿಯೂರಿನ 44 ವರ್ಷದ ಪುರುಷನಿಗೆ ಕೊರೊನಾ ಸೋಂಕು ಅಂಟಿದೆ. ಇವರನ್ನು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರ ಪತ್ತೆ ಕಾರ್ಯ ನಡೆಯುತ್ತಿದೆ.

ಬುಧವಾರ ಒಟ್ಟು 95 ಜನರ ಗಂಟಲು ಹಾಗೂ ಮೂಗಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ಇಬ್ಬರಿಗೆ ಕೋವಿಡ್ ಇರುವುದು ಗೊತ್ತಾಗಿದೆ. 92 ಸೋಂಕಿತರ ಪೈಕಿ 72 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನೂ 20 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.

ಜಿಲ್ಲೆಯಲ್ಲಿ 25 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,619 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಸಾರಿ ಮತ್ತು ಐಎಲ್ಐ, ಯುಆರ್ಐನ 2,507 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಪ್ರಯಾಣಿಕರಲ್ಲೇ ಹೆಚ್ಚು ಸೋಂಕು:

‘ಹೊರ ಜಿಲ್ಲೆಗೆ ಪ್ರಯಾಣ ಮಾಡಿದವರಲ್ಲೇ ಹೆಚ್ಚು ಸೋಂಕು ಕಂಡುಬರುತ್ತಿದೆ. ಒಂದು ವಾರದಿಂದ ಸೋಂಕು ದೃಢಪಟ್ಟವರಲ್ಲಿ ಬಹುತೇಕರು ಹೊರ ಜಿಲ್ಲೆಗೆ ಪ್ರಯಾಣಿಸಿದವರು. ಹೀಗಾಗಿ, ಪ್ರಯಾಣ ಬೆಳೆಸಿದವರ ಜಾಡು ಹಿಡಿದು ಸೋಂಕಿತರನ್ನು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ ತಿಳಿಸಿದ್ದಾರೆ.

‘ಪ್ರತಿ ತಾಲ್ಲೂಕಿನ ನಿತ್ಯ 50ಕ್ಕೂ ಹೆಚ್ಚು ಜನ ಶಂಕಿತರ ಗಂಟಲು ದ್ರವದ ಮಾದರಿ ಸಂಗ್ರಹಿಸಲು ನಿರ್ಧರಿಸಲಾಗಿದೆ. ಪ್ರತಿ ತಾಲ್ಲೂಕಿಗೆ ಒಂದು ವಾಹನದ ವ್ಯವಸ್ಥೆ ಮಾಡಲಾಗಿದೆ. ನಿತ್ಯ ಹಲವರ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಸೋಂಕು ಸಮುದಾಯಕ್ಕೆ ಇಳಿದಿದೆಯೇ ಎಂಬುದನ್ನು ಪರೀಕ್ಷಿಸಲು ಇದು ನೆರವಾಗಲಿದೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.