ಚಿತ್ರದುರ್ಗ: ಇಬ್ಬರು ಯುವಕರಿಗೆ ಕೊರೊನಾ ಸೋಂಕು ಇರುವುದು ಗುರುವಾರ ದೃಢಪಟ್ಟಿದ್ದು, ಕೋವಿಡ್ ರೋಗಿಗಳ ಸಂಖ್ಯೆ ಜಿಲ್ಲೆಯಲ್ಲಿ 94ಕ್ಕೆ ಏರಿಕೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಗೊಲ್ಲರಹಳ್ಳಿಯ 17 ವರ್ಷದ ಯುವಕ ಹಾಗೂ ಚಿತ್ರದುರ್ಗದ 28 ವರ್ಷದ ಯುವಕನಲ್ಲಿ ಸೋಂಕು ಪತ್ತೆಯಾಗಿದೆ. ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗುರುವಾರ 53 ಜನರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ಇಬ್ಬರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಜಿಲ್ಲೆಯ 94 ರೋಗಿಗಳಲ್ಲಿ 72 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ 22 ಸಕ್ರಿಯ ಪ್ರಕರಣಗಳಿವೆ.

ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 9, ಹಿರಿಯೂರು ತಾಲ್ಲೂಕು ಧರ್ಮಪುರದ ಕೋವಿಡ್ ಹೆಲ್ತ್ ಕೇರ್ ಸೆಂಟರ್‌ನಲ್ಲಿ 2, ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿಯಲ್ಲಿ 1, ಪರಶುರಾಂಪುರದಲ್ಲಿ 3, ಮೊಳಕಾಲ್ಮೂರು ತಾಲ್ಲೂಕು ರಾಂಪುರದಲ್ಲಿ 4, ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗದಲ್ಲಿ 1 ಹಾಗೂ ಹೊಸದುರ್ಗ ತಾಲ್ಲೂಕು ಬೆಲಗೂರಿನಲ್ಲಿ ಇಬ್ಬರು ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.