ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: 36 ಜನರಿಗೆ ಕೊರೊನಾ ಸೋಂಕು

Last Updated 31 ಜುಲೈ 2020, 15:58 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯ 36 ಜನರಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ. ಇದರಿಂದ ಕೋವಿಡ್‌ ರೋಗಿಗಳ ಸಂಖ್ಯೆ 661ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 10, ಹೊಳಲ್ಕೆರೆಯಲ್ಲಿ 2, ಹಿರಿಯೂರು, ಚಳ್ಳಕೆರೆ ಮತ್ತು ಹೊಸದುರ್ಗ ತಾಲ್ಲೂಕಿನಲ್ಲಿ ತಲಾ 7 ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 3 ಜನರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಸೋಂಕಿತರ ಪೈಕಿ 198 ಜನರು ಗುಣಮುಖರಾಗಿದ್ದು, ಸದ್ಯ 450 ಸಕ್ರಿಯ ಪ್ರಕರಣಗಳು ಇವೆ.

ಶುಕ್ರವಾರ 472 ಜನರ ಗಂಟಲು ಮತ್ತು ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪೈಕಿ 36 ಜನರಿಗೆ ಕೋವಿಡ್ ಇರುವುದು ಗೊತ್ತಾಗಿದೆ. ಚಳ್ಳಕೆರೆಯಲ್ಲಿ ಮೃತಪಟ್ಟ ವ್ಯಕ್ತಿಗೆ ಕೋವಿಡ್‌ ಇತ್ತು ಎಂಬುದು ಖಚಿತವಾಗಿದೆ. ಇದರಿಂದ ಮೃತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

450 ಸಕ್ರಿಯ ಪ್ರಕರಣಗಳಲ್ಲಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 84, ಭರಮಸಾಗರದಲ್ಲಿ 11, ಧರ್ಮಪುರದಲ್ಲಿ 52, ಪರಶುರಾಂಪುರದಲ್ಲಿ 17, ಹೊಸದುರ್ಗ ತಾಲ್ಲೂಕು ಬೆಲಗೂರಿನಲ್ಲಿ 31, ಕೆ.ಕೆ.ಪುರದಲ್ಲಿ 21, ಮೊಳಕಾಲ್ಮುರು ತಾಲ್ಲೂಕು ರಾಂಪುರದಲ್ಲಿ 15, ಆದರ್ಶ ಶಾಲೆಯಲ್ಲಿ 1, ಹಿರಿಯೂರು ತಾಲ್ಲೂಕು ಮರಡಿಹಳ್ಳಿಯಲ್ಲಿ 16, ನಾಯಕನಹಟ್ಟಿಯಲ್ಲಿ 15 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗದಲ್ಲಿ 24, ಹೊಳಲ್ಕೆರೆ ಹಾಸ್ಟೆಲ್ ಕೋವಿಡ್ ಕೇರ್ ಸೆಂಟರ್‌ನಲ್ಲಿ 3, ಚಿತ್ರದುರ್ಗದ ಜೆಎಂಐಟಿ ವೃತ್ತದ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ 10 ಜನರು ದಾಖಲಾಗಿದ್ದಾರೆ. 17 ಜನರು ಬೇರೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 116 ಜನರು ಗೃಹ ಆರೈಕೆಯಲ್ಲಿದ್ದಾರೆ. ಜಿಲ್ಲೆಯಲ್ಲಿ 180 ಕಂಟೈನ್‌ಮೆಂಟ್‌ ವಲಯಗಳಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT