ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

46 ಜನರಿಗೆ ಕೋವಿಡ್‌ ದೃಢ

Last Updated 2 ಆಗಸ್ಟ್ 2020, 13:52 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯಲ್ಲಿ ಭಾನುವಾರ 46 ಜನರಿಗೆ ಕೋವಿಡ್‌ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 767ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 3, ಹಿರಿಯೂರು 5, ಚಳ್ಳಕೆರೆ 25, ಹೊಸದುರ್ಗ 3 ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 10 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಸದ್ಯ 180 ಕಂಟೈನ್‌ಮೆಂಟ್‌ ವಲಯಗಳಿವೆ.

ಭಾನುವಾರ 437 ಜನರ ಗಂಟಲು, ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷಿಸಲಾಗಿತ್ತು. ಇದರಲ್ಲಿ 46 ಜನರಿಗೆ ಕೋವಿಡ್ ಇರುವುದು ಖಚಿತವಾಗಿದೆ. ಸೋಂಕಿತರ ಪೈಕಿ ಈಗಾಗಲೇ 282 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, 469 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 103, ಭರಮಸಾಗರ16, ಧರ್ಮಪುರ 34, ಪರಶುರಾಂಪುರ 12, ಹೊಸದುರ್ಗ ತಾಲ್ಲೂಕು ಬೆಲಗೂರು 19, ಕೆ.ಕೆ.ಪುರ 14, ಮೊಳಕಾಲ್ಮೂರು ತಾಲ್ಲೂಕು ರಾಂಪುರದಲ್ಲಿ 16, ಮರಡಿಹಳ್ಳಿ 28, ನಾಯಕನಹಟ್ಟಿಯಲ್ಲಿ 10 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗದಲ್ಲಿ 21, ಹೊಳಲ್ಕೆರೆ ಹಾಸ್ಟೆಲ್‌ನಲ್ಲಿ 3, ಜೆಎಂಐಟಿ ವೃತ್ತದ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ 13. ಮೊಳಕಾಲ್ಮುರಿನ ಆದರ್ಶ ಶಾಲೆಯಲ್ಲಿ 1, ಚಳ್ಳಕೆರೆ ಬಿಸಿಎಂ ಹಾಸ್ಟೆಲ್‌ನಲ್ಲಿ 23, ಹೊಸದುರ್ಗ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 2, ಬಿಎಂಸಿಎಚ್‌ನಲ್ಲಿ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. 24 ಜನರು ಬೇರೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 124 ಜನರು ಗೃಹ ಆರೈಕೆಯಲ್ಲಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT