ಮಂಗಳವಾರ, ಜೂನ್ 22, 2021
29 °C

ಚಿತ್ರದುರ್ಗ: ಜಿಲ್ಲೆಯಲ್ಲಿ 55 ಜನರಿಗೆ ಸೋಂಕು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಜಿಲ್ಲೆಯಲ್ಲಿ ಗುರುವಾರ 55 ಜನರಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ. ಇದರಿಂದ ಕೋವಿಡ್‌ ರೋಗಿಗಳ ಸಂಖ್ಯೆ 892ಕ್ಕೆ ಏರಿಕೆಯಾಗಿದೆ. ಗುಣಮುಖರಾದ 8 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಗುರುವಾರ ಒಟ್ಟು 645 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. 324 ಜನರು ರ‍್ಯಾಪಿಡ್‌ ಆಂಟಿಜನ್‌ ಕಿಟ್‌ ಹಾಗೂ 321 ಜನರು ಆರ್‌ಟಿಪಿಸಿಆರ್‌ ಪರೀಕ್ಷೆಗೆ ಒಳಗಾಗಿದ್ದರು. ಹೊಳಲ್ಕೆರೆ ತಾಲ್ಲೂಕಿನಲ್ಲಿ 23, ಚಿತ್ರದುರ್ಗ 4, ಹಿರಿಯೂರು 5, ಚಳ್ಳಕೆರೆ 4, ಹೊಸದುರ್ಗ 15 ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 4 ಪ್ರಕರಣ ದೃಢಪಟ್ಟಿವೆ.

ಸೋಂಕಿತರ ಪೈಕಿ ಈಗಾಗಲೇ 480 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಸದ್ಯ 398 ಸಕ್ರಿಯ ಪ್ರಕರಣಗಳಿವೆ. 17 ಜನರು ಮರಣ ಹೊಂದಿದ್ದಾರೆ. ಜಿಲ್ಲೆಯಲ್ಲಿ 286 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ 6,269 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು