ಗುರುವಾರ , ಜೂನ್ 24, 2021
27 °C

110 ಜನರಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಜಿಲ್ಲೆಯಲ್ಲಿ ಭಾನುವಾರ 110 ಜನರಿಗೆ ಕೋವಿಡ್‌ ತಗುಲಿರುವುದು ಖಚಿತವಾಗಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 16,647ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಭಾನುವಾರ 2,024 ಜನರ ಗಂಟಲು ಹಾಗೂ ಮೂಗಿನ ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಪರೀಕ್ಷೆಗೆ ಒಳಪಡಿಸಿದ ಮಾದರಿಗಳ ಪೈಕಿ ಚಿತ್ರದುರ್ಗ ತಾಲ್ಲೂಕಿನಲ್ಲಿ 44 ಪ್ರಕರಣ ಪತ್ತೆಯಾಗಿವೆ. ಹೊಸದುರ್ಗ 22, ಹೊಳಲ್ಕೆರೆ 12, ಚಳ್ಳಕೆರೆ 10, ಮೊಳಕಾಲ್ಮುರು ಮತ್ತು ಹಿರಿಯೂರು ತಲಾ 6 ಹಾಗೂ ಹೊರ ಜಿಲ್ಲೆಯ 10 ಪ್ರಕರಣ ಖಚಿತವಾಗಿವೆ.

ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದ 49 ಜನರು ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 15,700 ಜನರು ಕೋವಿಡ್‌ನಿಂದ ಗುಣಮುಖರಾಗಿ
ದ್ದಾರೆ. ಸದ್ಯ 877 ಸಕ್ರಿಯ ಪ್ರಕರಣ ಜಿಲ್ಲೆಯಲ್ಲಿವೆ. 70 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು