ಗುರುವಾರ , ಮೇ 13, 2021
40 °C

ಚಿತ್ರದುರ್ಗ ತಾಲ್ಲೂಕಿನಲ್ಲಿ ಸೋಂಕು ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಜಿಲ್ಲೆಯಲ್ಲಿ ಸೋಮವಾರ 95 ಜನರಲ್ಲಿ ಕೋವಿಡ್‌ ದೃಢಪಟ್ಟಿದೆ. ಇದರಲ್ಲಿ 39 ಪ್ರಕರಣಗಳು ಚಿತ್ರದುರ್ಗ ತಾಲ್ಲೂಕಿನಲ್ಲೇ ಪತ್ತೆಯಾಗಿವೆ. ಕೊರೊನಾ ಸೋಂಕಿನ ಸಂಖ್ಯೆ ದಿನ ಕಳೆದಂತೆ ಏರಿಕೆ ಆಗುತ್ತಿದೆ.

ಜಿಲ್ಲೆಯಲ್ಲಿ ಸೋಮವಾರ 1,672 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಚಳ್ಳಕೆರೆ 10, ಹಿರಿಯೂರು 17, ಹೊಳಲ್ಕೆರೆ 6, ಹೊಸದುರ್ಗ 11, ಮೊಳಕಾಲ್ಮುರು ತಾಲ್ಲೂಕಿನಲ್ಲಿ 3 ಹಾಗೂ ಹೊರ ಜಿಲ್ಲೆಯ 9 ಪ್ರಕರಣಗಳು ಖಚಿತವಾಗಿವೆ. ಇನ್ನೂ 790 ಜನರ ವರದಿ ಬರುವುದು ಬಾಕಿ ಇದೆ.

ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 23 ಜನರು ಚೇತರಿಸಿಕೊಂಡಿದ್ದಾರೆ. ಸೋಂಕು ಕಾಣಿಸಿಕೊಂಡ 15,923 ಜನರಲ್ಲಿ 15,433 ಜನರು ಗುಣಮುಖರಾಗಿದ್ದಾರೆ. 70 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸದ್ಯ 420 ಸಕ್ರಿಯ ಪ್ರಕರಣಗಳು ಇವೆ.

ಸೋಂಕಿತರಿಗೆ ಸಂಬಂಧಿಸಿದಂತೆ ಈವರೆಗೆ 1,27,803 ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 3,90,917 ಜನರ ಮಾದರಿ ಸಂಗ್ರಹಿಸಲಾಗಿದ್ದು, 3,73,499 ಜನರ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.