ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗದಲ್ಲಿ 30 ಜನರಿಗೆ ಕೋವಿಡ್

Last Updated 12 ಡಿಸೆಂಬರ್ 2020, 14:11 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯಲ್ಲಿ ಶನಿವಾರ 30 ಜನರಿಗೆ ಕೋವಿಡ್‌ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 13,878ಕ್ಕೆ ಏರಿಕೆಯಾಗಿದೆ.

ಶನಿವಾರ 1,694 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಪರೀಕ್ಷೆ ಮಾಡಿದ ಮಾದರಿಗಳಲ್ಲಿ 30 ಜನರಿಗೆ ಕೊರೊನಾ ಇರುವುದು ಖಚಿತವಾಗಿದೆ. ಕೋವಿಡ್‌ನಿಂದ ಈವರೆಗೆ 67 ಜನರು ಮೃತಪಟ್ಟಿದ್ದಾರೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶನಿವಾರ 22 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 13,613 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 198 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT