ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

24 ಪದವಿ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

Last Updated 22 ನವೆಂಬರ್ 2020, 16:29 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳು ಆರಂಭವಾದ ಬಳಿಕ ಶನಿವಾರವೂ 1,725 ವಿದ್ಯಾರ್ಥಿಗಳು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು, ಅದರಲ್ಲಿ 24 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ.

ತೀವ್ರ ಸ್ವರೂಪದ ಲಕ್ಷಣ ಯಾರಲ್ಲೂ ಕಂಡು ಬರದ ಕಾರಣ ಮನೆಯಲ್ಲೇ ಚಿಕಿತ್ಸೆ ಪಡೆಯಲು ವಿದ್ಯಾರ್ಥಿಗಳು ಮುಂದಾಗಿದ್ದಾರೆ. ಭಾನುವಾರ ಪರೀಕ್ಷೆ ಮಾಡಿಸಿಕೊಂಡ ಕೆಲ ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿದೆ.

ಜಿಲ್ಲೆಯಲ್ಲಿ ಕೋವಿಡ್‌ಗೆ ‌ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 22 ಜನ ಗುಣಮುಖರಾಗಿದ್ದಾರೆ. ವರದಿಯಲ್ಲಿ ಹೊಸದಾಗಿ 21 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 13,302ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ 2,136 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಪರೀಕ್ಷೆಗೆ ಒಳಪಡಿಸಿದ ವರದಿಯಲ್ಲಿ 21 ಜನರಿಗೆ ಸೋಂಕು ಇರುವುದು ಖಚಿತವಾಗಿದೆ.

ಕೋವಿಡ್‌ ಸೋಂಕಿತರಲ್ಲಿ ಈವರೆಗೆ 13,010 ಜನರು ಗುಣಮುಖರಾಗಿದ್ದಾರೆ. 64 ಜನರು ಕೋವಿಡ್‌ನಿಂದ ಮೃತಪಟ್ಟಿದ್ದು, 227 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT